ಬೆಂಗಳೂರು : ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಕೇರಳ ನಡುವಿನ ಬಸ್ ಸಂಚಾರವನ್ನು ಬಂದ್ ಮಾಡಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದಂತೆಯೇ ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಇದೀಗ ಜನರ ಸಂಚಾರವನ್ನು ತಡೆಯುವ ನಿಟ್ಟಿನಲ್ಲಿ ಕಾಸರಗೋಡು ಹಾಗೂ ಮಂಗಳೂರು ನಡುವಿನ ಬಸ್ ಸಂಚಾರವನ್ನು ಒಂದು ವಾರಗಳ ಬಂದ್ ಮಾಡಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆಯಿಂದ ಕಠಿಣ ರೂಲ್ಸ್ ಜಾರಿ ತರಲಾಗುತ್ತಿದೆ. ಕೇರಳದಿಂದ ರಾಜ್ಯಕ್ಕೆ ಬರುವವರು ಎರಡು ಡೋಸ್ ಲಸಿಕೆ ಪಡೆದಿರಬೇಕು. ಅಲ್ಲದೇ ೭೨ ಗಂಟೆಗಳ ಮೊದಲು ಮಾಡಿಸಿರುವ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೇರಳ ಗಡಿಯಲ್ಲಿ ಕಟ್ಟೆಚ್ಚರವನ್ನು ವಹಿಸಲಾಗುತ್ತಿದೆ. ಕೇರಳದಿಂದ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಗಡಿಭಾಗದ ಜಿಲ್ಲೆಗಳಲ್ಲಿ ಕೊರೊನಾ ಟೆಸ್ಟಿಂಗ್ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ. ಅಲ್ಲದೇ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಯನ್ನು ನೀಡಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.