ಕರ್ನಾಟಕದಲ್ಲಿ ಕೊರೊನಾ ಆರ್ಭಟ : ಸೋಂಕು ತಗ್ಗಿದ್ರೂ ಹೆಚ್ಚುತ್ತಿದೆ ಸಾವಿನ ಪ್ರಮಾಣ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಾಣುತ್ತಿದೆ. ಆದರೆ ಸಾವಿನ ಪ್ರಮಾಣ ಮಾತ್ರ ಏರಿಕೆ ಯಾಗುತ್ತಿರೋದು ಆತಂಕವನ್ನು ಮೂಡಿಸಿದೆ. ರಾಜ್ಯದಲ್ಲಿ ಇದುವರೆಗೆ ಬರೋಬ್ಬರಿ 25,282 ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ನಿತ್ಯವೂ ಕೊರೊನಾ 400ರಷ್ಟು ಕೊರೊನಾ ಪ್ರಕರಣ ದಾಖಲಾಗಿದ್ದು, ಭಾನುವಾರ 626 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು ರಾಜ್ಯದಲ್ಲಿ ದಾಖಲಾದ ಅತ್ಯಧಿಕ ಸಾವಿನ ಸಂಖ್ಯೆಯಾಗಿದೆ. ಕಳೆದೊಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 11 ಸಾವಿರ ಮಂದಿ ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಭಾನುವಾರ 25,979 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 24,24,904ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 4,72,986 ಸಕ್ರೀಯ ಪ್ರಕರಣಗಳಿವೆ. ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದ್ದರೂ ಕೂಡ ಸಾವಿನ ಪ್ರಮಾಣ ಮಾತ್ರ ಏರಿಕೆಯಾಗುತ್ತಿರೋದು ಆತಂಕ ಮೂಡಿಸಿದೆ.

https://kannada.newsnext.live/sandalwood-meghanaraj-shared-fans-art-family-photo-with-jr-chiru/
https://kannada.newsnext.live/navy-personnel-rapes-colleague-s-wife-mumbai/

Comments are closed.