ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿತ್ಯವೂ ಸರಿ ಸುಮಾರು 10 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 75 ಸಾವಿರಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 9,579 ಮಂದಿಗೆ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದ್ದು ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿಂದು 6,387 ಹೊಸದಾಗಿ ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಬೆಂಗಳೂರು ಮಾತ್ರವಲ್ಲದೇ ಬೀದರ್ನಲ್ಲಿ 465, ಕಲಬುರ್ಗಿಯಲ್ಲಿ 335, ಮೈಸೂರಿನಲ್ಲಿ 362, ತುಮಕೂರಿನಲ್ಲಿ 239, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 192 ಪ್ರಕರಣಗಳು ದೃಢಪಟ್ಟಿದೆ.
ರಾಜ್ಯದಲ್ಲಿ ಕೊರೊನಾ ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ರಾಜ್ಯದಲ್ಲಿ ಒಟ್ಟು 75,985 ಮಂದಿ ಕೊರೊನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.