ಹುಬ್ಬಳ್ಳಿ :ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪಾಸಿಟಿವಿಟಿ ದರ ಶೇ..5 ಕ್ಕೆ ಇಳಿಕೆಯಾದ್ರೆ ಲಾಕ್‌ಡೌನ್ ತೆರವು ಮಾಡುವುದರಲ್ಲಿ ಯಾವುದೇ ಸಂದೇಹ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‍ನಲ್ಲಿ ಧಾರವಾಡ ಜಿಲ್ಲೆಯ ಕೋವಿಡ್ ನಿಯಂತ್ರಣ ಹಾಗೂ ಇತರ ಅಭಿವೃದ್ಧಿ ವಿಷಯ ಗಳ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.17.09 ರಷ್ಟಿದ್ದು, ಅದು ಶೇ.05 ಕ್ಕೆ ಬಂದರೆ ಅನ್ ಲಾಕ್ ಮಾಡುವುದರಲ್ಲಿ ಯಾರಿಗೂ ಸಂದೇಹ ಬೇಡ ಎಂದಿದ್ದಾರೆ.
ಬ್ಲ್ಯಾಕ್ ಫಂಗಸ್ ಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 9 ಸಾವಿರ ಅಂಪೋಟೆರಿಸನ್ ಬಿ ಔಷಧ ಬಂದಿದೆ. ಔಷಧ ವನ್ನು ಹಂಚಿಕೆ ಕಾರ್ಯ ನಡೆಯುತ್ತಿದೆ. ಅಲ್ಲದೇ ಮೂರನೇ ಅಲೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ.