ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆಗಮನದ ನಂತರ ತಣ್ಣಗಾಗಿದ್ದ ಮಳೆ ಮುಂದಿನ ಮೂರು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಸುರಿಯಲಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಲೂ ಮಳೆ ಸುರಿಯುತ್ತಿದೆ. ಆದರೆ ಜೂನ್ 27 ರಿಂದ ಜೂನ್ 30 ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ನೆರೆಯ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆ ಸುರಿಯು ತ್ತಿದೆ. ಕರಾವಳಿ ಮಾತ್ರವಲ್ಲದೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.