ಋತುಚಕ್ರದ ರಜೆ ಮಹಿಳೆಯರ ಘನತೆಯ ಹಕ್ಕು : ಹೋಟೆಲ್, ಐಟಿ ಸೇರಿದಂತೆ ಎಲ್ಲಾ ವಲಯಗಳಲ್ಲಿ ನಿಯಮ ಜಾರಿ ಕಡ್ಡಾಯ

ಮಹಿಳಾ ನೌಕರರಿಗೆ ಋತುಚಕ್ರದ ಸಂದರ್ಭದಲ್ಲಿ ವೇತನ ಸಹಿತ ಮಾಸಿಕ 1 ದಿನದ ರಜೆಯನ್ನು ನೀಡುವ ರಾಜ್ಯ ಸರ್ಕಾರದ ಘೋಷಣೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಹೈಕೋರ್ಟ್ ಖಡಕ್​ ಆದೇಶ ನೀಡಿದೆ. ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆಯಾದರೂ ಸಂಘಟಿತ ಹಾಗೂ ಸಂಘಟಿತ ವಲಯಗಳಲ್ಲಿ ಪರಿಣಾಮಕಾರಿಯಾಗಿ ನಿಯಮಗಳು ಜಾರಿಗೆ ಬರುತ್ತಿಲ್ಲ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮುಧೋಳ ಗ್ರಾಮದ ನಿವಾಸಿ ಚಂದ್ರವ್ವ ಹಣುಮಂತ ಗೋಕಾವಿ ಎಂಬವರು, ಹೋಟೆಲ್​ ಒಂದರಲ್ಲಿ ಕಾರ್ಯನಿರ್ವಹಿಸುವ ಮಹಿಳೆ. ದಿನವಿಡೀ ದೈಹಿಕ ಶ್ರಮದ ಹೊರತಾಗಿಯೂ, ಋತುಚಕ್ರದ ಸಂದರ್ಭದಲ್ಲಿ ರಜೆಯ ಸಿಗುತ್ತಿರಲಿಲ್ಲ. ರಾಜ್ಯಾದ್ಯಂತ ಮುಟ್ಟಿನ ರಜೆ ಘೋಷಣೆಯಾದಾಗ ಸಂಭ್ರಮಿಸಿದ ಮಹಿಳೆಯರ ಪೈಕಿ ಚಂದ್ರವ್ವ ಕೂಡ ಒಬ್ಬರು. ಆದರೆ ಹೋಟೆಲ್​ ವಲಯಗಳಲ್ಲಿ ಋತುಚಕ್ರದ ರಜೆ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಮನಗಂಡು ಲಕ್ಷಾಂತರ ಮಹಿಳಾ ಕಾರ್ಮಿಕರಿಗೆ ನೆರವಾಗುವ ಉದ್ದೇಶದಿಂದ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಇದನ್ನೂ ಓದಿ: ಶಾಸಕ ವಿನಯ್​ ಕುಲಕರ್ಣಿ ಕೊಲೆಗಾರ : ಶಿಕ್ಷೆ ಪ್ರಮಾಣ ಇಂದು ಪ್ರಕಟ

ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಧಾರವಾಡದ ಪೀಠವು, ಋತುಚಕ್ರದ ರಜೆಯು ಕೇವಲ ಒಂದು ಸವಲತ್ತಲ್ಲ, ಅದು ಸಂವಿಧಾನದ 21ನೇ ವಿಧಿಯಡಿ ಮಹಿಳೆಯರ ಘನತೆ ಮತ್ತು ದೈಹಿಕ ಸ್ವಾಯತ್ತತೆಯ ಅವಿಭಾಜ್ಯ ಅಂಗ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ರಾಜ್ಯ ಸರ್ಕಾರವು ಈಗಾಗಲೇ ಹೊರಡಿಸಿರುವ ಋತುಚಕ್ರ ರಜೆ ನೀತಿಯನ್ನ ಕೂಡಲೇ ಜಾರಿಗೆ ತರಬೇಕು.ಈ ನಿಯಮವು ಕೇವಲ ಐಟಿ ಅಥವಾ ಸರ್ಕಾರಿ ಕೆಲಸಗಳಿಗೆ ಸೀಮಿತವಲ್ಲ. ಇದು ಹೋಟೆಲ್ ಕಾರ್ಮಿಕರು, ದಿನಗೂಲಿ ನೌಕರರು ಮತ್ತು ಅಸಂಘಟಿತ ವಲಯದ ಪ್ರತಿಯೊಬ್ಬ ಮಹಿಳೆಗೂ ಅನ್ವಯಿಸುತ್ತದೆ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಅಲ್ಲದೇ ಋತುಚಕ್ರದ ರಜೆಯು ಸರ್ಕಾರದ ಘನತೆಯ ಹೋಟೆಲ್‌ಗಳು ಮತ್ತು ಇತರ ಖಾಸಗಿ ಉದ್ಯಮಗಳಲ್ಲಿ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರವು ಸುತ್ತೋಲೆ ಹೊರಡಿಸಬೇಕಿದೆ ವಿಷಯ ಕೂಡ ಆಗಿದ್ದು, ಇದರ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ತೀರ್ಪು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಸಂಪೂರ್ಣ ದೇಶಕ್ಕೆ ಮಾದರಿಯಾಗಿದೆ ಎಂದು ಕೋರ್ಟ್ ಹೇಳಿದೆ.

 

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories