ಬೆಂಗಳೂರು : ಕೊರೊನಾ ವೈರಸ್ ಸೋಂಕನ್ನು ಹೊರತುಪಡಿಸಿ ಉಳಿದ ರೋಗಿಗಳ ಚಿಕಿತ್ಸೆಗೆ ಕೋವಿಡ್ ನೆಗೆಟಿವ್ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನೇತರ ರೋಗಿಗಳ ಚಿಕಿತ್ಸೆಗೆ ಕೊರೊನಾ ನೆಗೆಟಿವ್ ವರದಿ ಕೇಳುತ್ತಿವೆ. ಹೀಗಾಗಿ ಸೋಂಕಿನ ಲಕ್ಷಣ ಇಲ್ಲದವರು ಕೊರೊನಾ ನೆಗೆಟಿವ್ ವರದಿಗೆ ಪರದಾಟ ನಡೆಸುತ್ತಿ ದ್ದಾರೆ. ಇದೀಗ ರೋಗಿಗಳಿಗೆ ಕೋವಿಡ್ ವರದಿ ಅಗತ್ಯವಿಲ್ಲ ಎಂದಿದೆ.
ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಕೊರೊನೇತರ ಚಿಕಿತ್ಸೆಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯವಲ್ಲ. ಸೋಂಕು ಲಕ್ಷಣ ಇಲ್ಲದಿದ್ದರೆ ಅಂತಹವರನ್ನು ದಾಖಲಿಸಿಕೊಂಡು ಚಿಕಿತ್ಸೆ ನಿಡಬೇಕು ಎಂದು ತಿಳಿಸಿದೆ.
ಕೊರೊನಾ ಸೋಂಕಿನ ಲಕ್ಷಣ ಇಲ್ಲದವರ ಚಿಕಿತ್ಸೆಗೆ ಯಾವುದೇ ವರದಿ ಅಗತ್ಯವಿಲ್ಲ. ಆಸ್ಪತ್ರೆಯಲ್ಲಿ ದಾಖಲಸಿಕೊಂಡ ನಂತರ ಸೋಂಕಿನ ಲಕ್ಷಣ ಗಳು ಪತ್ತೆಯಾದರೆ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಿ ಪಾಸಿಟಿವ್ ಬಂದರೆ ಪ್ರತ್ಯೇಕ ವಾರ್ಡ್ ನಲ್ಲಿಟ್ಟು ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
