ಸಿಆರ್‌ಪಿಎಫ್‌ ನೇಮಕಾತಿ ಪರೀಕ್ಷೆ 2023 : ಹಿಂದಿ, ಇಂಗ್ಲಿಷ್‌ ಕಡ್ಡಾಯ ತಕ್ಷಣವೇ ಸಡಿಲಿಸಿ ; ಸಿದ್ದು ಆಗ್ರಹ

ಬೆಂಗಳೂರು : (CRPF Recruitment Exam 2023) ಭಾರತದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪೈಕಿ ದೊಡ್ಡ ಪಡೆಯಾದ ಕೇಂದ್ರ ಮೀಸಲು ಪೊಲೀಸ್‌ ಪಡೆಯ ನೇಮಕಾತಿ ಪರೀಕ್ಷೆ ನಡೆದಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಹಿಂದಿ ಹಾಗೂ ಇಂಗ್ಲಿಷ್‌ ನಲ್ಲಿಯೇ ಪರೀಕ್ಷೆ ಬರೆಯಲು ತಿಳಿಸಲಾಗಿದ್ದು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಒದಗಿಸಿಲ್ಲ. ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯನವರು ಈ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣವೇ ಸಡಿಲಿಸಿ ಎಂದು ಮೋದಿ ಅವರಿಗೆ ಆಗ್ರಹಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್‌ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ನಡೆಸಲಾಗುತ್ತಿದ್ದು, ಈ ಕಡ್ಡಾಯಗೊಳಿಸುವಿಕೆಯನ್ನು ತಕ್ಷಣವೇ ಹಿಂದಕ್ಕೆ ಪಡೆದು, ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟು ಅನ್ಯಾಯವನ್ನು ಸರಿದೂಗಿಸಿ ಎಂದು ಸಿದ್ದರಾಮಯ್ಯನವರು ಮೋದಿ ಅವರಲ್ಲಿ ಆಗ್ರಹಿಸಿದ್ದಾರೆ. ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನವಷ್ಟೇ. ಕನ್ನಡ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರು ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರಕಾರ ನಡೆಸುತ್ತಿರುವ ಪರೀಕ್ಷೆಯಲ್ಲು ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ ಎಂದು ಸಿದ್ದರಾಮಯ್ಯ ಆಗುತ್ತಿರುವ ಅನ್ಯಾಯದ ವಿರುದ್ದ ದನಿಯೆತ್ತಿದ್ದಾರೆ.

ರಾಜ್ಯ ಸರಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಹಾಗೂ ಕೇಂದ್ರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗವಂಚಿತರಾಗುತ್ತಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದ್ದು, ಯುವಜನರ ಭವಿಷ್ಯ ಮಂಕಾಗುತ್ತಿದೆ. ಕೇಂದ್ರ ಸರಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ತಲೆಯ ಮೇಲೆ ಹೇರುವ ಪ್ರಯತ್ನ ಮಾಡುತ್ತಿದೆ. ಇದಲ್ಲದೇ ನಿರಂತರವಾಗಿ ಹಿಂದಿ ಹೇರಿಕೆ ಪ್ರಯತ್ನ ನಡೆಸುತ್ತಿದೆ. ಉದ್ಯಮ, ಉದ್ಯೋಗ ಹೀಗೆ ಎಲ್ಲದರಲ್ಲೂ ಹಿಂದಿಯ ಯಜಮಾನಿಕೆ ಹೆಚ್ಚುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ದ ಸಿದ್ದು ಕಿಡಿಕಾರಿದ್ದಾರೆ.

ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಕಾರಣ ಅನೇಕರು ನಿರುದ್ಯೋಗಿಗಳಾಗಿಯೇ ಉಳಿಯುತ್ತಿದ್ದಾರೆ. ಈ ಕಾರಣಕ್ಕೆ ಕೇಂದ್ರ ಮೀಸಲು ಪೊಲೀಸ್‌ ಪಡೆ ನೇಮಕಾತಿ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡುವಂತೆ ರಾಜ್ಯದ ಮುಖ್ಯಮಂತ್ರಿ ಹಾಗೈ ಸಂಸದರು ಪ್ರಧಾನಿಯವರನ್ನು ಒತ್ತಾಯಿಸುವಂತೆ ಸರಣಿ ಟ್ವೀಟ್‌ ಗಳ ಮೂಲಕ ಸಿದ್ದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

CRPF Recruitment Exam 2023: CRPF Recruitment Exam 2023 : Hindi, English Compulsory Released Immediately; Siddu Agraha

Comments are closed.