Cyclone Biparjoy effect‌ : ಹವಾಮಾನ ವರದಿ : ಕರ್ನಾಟಕಕ್ಕೆ 2 ದಿನಗಳಲ್ಲಿ ಮುಂಗಾರು ಮಳೆ ಪ್ರವೇಶ

ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆಯಾಗಲಿದೆ ಎಂದು (Cyclone Biparjoy effect‌) ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಕೇರಳ ಕರಾವಳಿಗೆ ಮಳೆ ಪ್ರವೇಶಿಸಿದ ಸುಮಾರು 3 ರಿಂದ 4 ದಿನಗಳ ನಂತರ ಕರ್ನಾಟಕದಲ್ಲಿ ಮುಂಗಾರು ಮಳೆ ನಿರೀಕ್ಷಿಸಲಾಗುತ್ತದೆ. ಅದರಂತೆ ಕೇರಳದಲ್ಲೂ ಮಳೆರಾಯನ ಆರ್ಭಟ ಜೋರಾಗಿದೆ. ಕರ್ನಾಟಕದ ಕೆಲವು ರಾಜ್ಯಗಳು ಸೇರಿದಂತೆ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ನಿನ್ನೆ ಸಂಜೆಯಿಂದ ಗುಡುಗು ಮಿಂಚಿನೊಂದಿಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಹೀಗಾಗಿ ಬೇಸಿಗೆ ಸೆಕೆಯಿಂದ ಹೈರಣವಾಗಿದ್ದ ಜನರಿಗೆ ಮಳೆಯಿಂದ ತಂಪು ಎರೆದಂತೆ ಆಗಿದೆ. ಮಳೆ ಸ್ವಲ್ಪ ಜೋರಾಗಿ ಬಂದಿರುವುದರಿಂದ ಕರಾವಳಿ ಭಾಗದಲ್ಲಿ ಇರುವ ರೈತರು ತಮ್ಮ ಬಿತ್ತನೆ ಕೆಲಸಕ್ಕೆ ಬೇಕಾಗುವ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ.

ಅಷ್ಟೇ ಅಲ್ಲದೇ ನೈಋತ್ಯ ಕರಾವಳಿಯಲ್ಲಿ ಬಿಪರ್‌ಜೋಯ್‌ ಚಂಡಮಾರುತ ಮಾನ್ಸೂನ್‌ ಆರಂಭದ ಮೇಲೆ ಪರಿಣಾಮ ಬೀರುವ ಕಾರಣ ಕೇರಳದಲ್ಲಿ ಮುಂಗಾರು ಮಳೆ ಶುರುವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ರೀತಿಯಲ್ಲಿ ಮಳೆ ಮುಂದುವರಿದರೆ ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆಯಾಗಲಿದೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Objection to free bus pass : ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸರಕಾರದ ಆದೇಶಕ್ಕೆ ಕೆಎಸ್‌ಆರ್‌ಟಿಸಿ ಆಕ್ಷೇಪ

ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿಯೇ ಕರ್ನಾಟಕ ಕರಾವಳಿ ಭಾಗಗಳಿಗೆ ಮಾನ್ಸೂನ್‌ ಮಳೆ ಆಗಮನವಾಗಬೇಕಾಗಿತ್ತು. ಆದರೆ ಈ ಬಾರಿ ಕೇರಳಕ್ಕೆ ಮುಂಗಾರು ಎಂಟ್ರಿ ವಿಳಂಭವಾಗಿರುವುದು ಕರ್ನಾಟಕದ ಮೇಲೆಯೂ ಹೊಡೆತ ಕೊಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಆರಂಭವಾಗುವ ಸಾಧ್ಯತೆಯಿದೆ. ಬಿಪರ್‌ಜೋಯ್‌ ಚಂಡಮಾರುತದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಈಗಾಗಲೇ ಮುನ್ಸೂಚನೆಯನ್ನು ನೀಡಿದೆ.

Cyclone Biparjoy effect: Weather report: Monsoon rains to enter Karnataka in 2 days

Comments are closed.