Cyclone Biparjoy : ಬಿಪರ್‌ಜಾಯ್ ಚಂಡಮಾರುತ ಆರ್ಭಟ : ಮುಂದಿನ 3 ದಿನ ಕರ್ನಾಟಕದಲ್ಲಿ ಬಾರೀ ಮಳೆ

ಬೆಂಗಳೂರು : ಆಗ್ನೇಯ ಅರಬ್ಬಿ ಸಮುದ್ರದಲ್ಲಿ (Cyclone Biparjoy) ಬಿಪರ್‌ಜಾಯ್ ಚಂಡಮಾರುತದ ಅಲೆ ತೀವ್ರ ಸ್ವರೂಪಗೊಳಲಿದ್ದು, ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೇ ಮುಂದಿನ 48 ಗಂಟೆಗಳಲ್ಲಿ ಬಿಪರ್‌ಜಾಯ್ ಚಂಡಮಾರುತ ಆರ್ಭಟ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಲಿದೆ. ಹೀಗಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಮುಂದಿನ ಮೂರು ನಾಲ್ಕು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಚಂಡಮಾರುತ ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ನಂತರದಲ್ಲಿ ತೀವ್ರ ಚಂಡಮಾರುತವಾಗಿ ಏರ್ಪಡುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಿದೆ. ಇನ್ನುಳಿದಂತೆ ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಿಜೋರಾಂ, ಮಣಿಪುರ, ಅರುಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ : ಉಚಿತ.. ಉಚಿತ.. ಉಚಿತ ಎನ್ನುತ್ತಲೇ ಗ್ರಾಹಕರಿಗೆ ವಿದ್ಯುತ್‌ ಶಾಕ್‌ ಕೊಟ್ಟ ರಾಜ್ಯ ಸರಕಾರ

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಮತ್ತಷ್ಟು ತೀವ್ರತೆ ಪಡೆದುಕೊಂಡಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ಮೂರು ದಿನಗಳ ಕಾಲ ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಗುಜರಾತ್ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡ ಮಾರುತ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಪ್ರವಾಸಿಗರು ಮತ್ತು ಸ್ಥಳೀಯರು ಸಮುದ್ರ ಮತ್ತು ನದಿ ತೀರಕ್ಕೆ ಹೋಗದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹವಾಮಾನ ಇಲಾಖೆ ಎಚ್ಚರಿಕೆಯನ್ನೂ ನೀಡಿದೆ.

Cyclone Biparjoy : Rain again in next 3 days in Karnataka

Comments are closed.