ಉಡುಪಿ : ಗುಜರಿ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು (Cylinder explosion) ಇಬ್ಬರು ಸಾವನ್ನಪ್ಪಿರುವ ದುರಂತ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದು ಬೆಂಕಿ ನಂದಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ.

ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ರಜಾಕ್ ಮಲಾರ್ ಹಾಗೂ ಗುಜರಿ ಅಂಗಡಿಯ ಪಾಲುದಾರ ರಜಬ್ ಸಾವನ್ನಪ್ಪಿದ್ದಾರೆ. ಅಲ್ಲದೇ ಮತ್ತೋರ್ವ ಪಾಲುದಾರ ಹಸನಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಜರಿಗೆ ಬಂದಿದ್ದ ಸಿಲಿಂಡರ್ ಸ್ಪೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಒಟ್ಟು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುಜರಿ ಅಂಗಡಿಯಲ್ಲಿ ಹಳೆಯ ಗ್ರಹೋಪಕರಣಗಳನ್ನು ಇರಿಸಲಾಗಿದೆ. ಸಿಲಿಂಡರ್ ಸ್ಪೋಟ ಸಂಭವಿಸುತ್ತಿದ್ದಂತೆಯೇ ಬೆಂಕಿ ಹೊತ್ತಿ ಉರಿಯಲು ಆರಂಭಿಸಿದೆ. ಗುಜರಿ ವಸ್ತುಗಳು ಸುಟ್ಟು ಕರಕಲಾಗಿರುವುದರಿಂದಾಗಿ ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಉಡುಪಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಇದೀಗ ಬೆಂಕಿ ನಂದಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ.
ಉಡುಪಿಯಲ್ಲಿ ಆಸ್ತಿ ವಿವಾದಕ್ಕೆ ತಮ್ಮನಿಂದ ಅಣ್ಣನ ಭೀಕರ ಹತ್ಯೆ
ಉಡುಪಿ : ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನು ಕತ್ತಿಯಿಂದ ತಮ್ಮ ಭೀಕರವಾಗಿ ಹತ್ಯೆಗೈದಿರುವ (Murder) ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ೮೦ ಬಡಗಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಬಾಲಕೃಷ್ಣ ನಾಯ್ಕ್ ( 43 ವರ್ಷ) ಎಂಬಾತನೇ ಕೊಲೆಯಾದ ದುರ್ದೈವಿ. ದಯಾನಂದ ಎಂಬಾತನೇ ಅಣ್ಣನನ್ನು ಕೊಲೆಗೈದ ಆರೋಪಿ. ಕಬ್ಯಾಡಿ ಗ್ರಾಮದ ಕಂಬಳಕಟ್ಟ ಎಂಬಲ್ಲಿನ ಮನೆಯ ವಾಸ್ತವ್ಯದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕೃಷ್ಣ ಹಾಗೂ ದಯಾನಂದ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರಕ್ಕೆ ದಯಾನಂದ ಹಾಗೂ ಬಾಲಕೃಷ್ಣ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆಯಲ್ಲಿ ಕೋಪಗೊಂಡ ದಯಾನಂದ ಮನೆಯಲ್ಲಿದ್ದ ಕತ್ತಿಯಿಂದ ಅಣ್ಣ ಬಾಲಕೃಷ್ಣನ ತಲೆ ಕಡಿದು ಹಲ್ಲೆ ನಡೆಸಿದ್ದಾನೆ. ಇದರಿಂದಾಗಿ ಬಾಲಕೃಷ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಿತ್ಯಾನಂದ ನಾಯ್ಕ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಣಿಪಾಲ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಣಿಪಾಲ ಸರ್ಕಲ್ ಇನ್‌ಸ್ಪೆಕ್ಟರ್ ಮಂಜುನಾಥ್, ಮಣಿಪಾಲ ಪೊಲೀಸ್ ಠಾಣಾಧಿಕಾರಿ ರಾಜಶೇಖರ್ ಹೊಂದಾಳೆ ಹಾಗೂ ಸುಧಾಕರ ತೋನ್ಸೆ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.
ಇದನ್ನೂ ಓದಿ : ಉಡುಪಿಯಲ್ಲಿ ಆಸ್ತಿ ವಿವಾದಕ್ಕೆ ತಮ್ಮನಿಂದ ಅಣ್ಣನ ಭೀಕರ ಹತ್ಯೆ
ಇದನ್ನೂ ಓದಿ : ರೈಲಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಶೌಚಾಲಯದಲ್ಲಿ ಅತ್ಯಾಚಾರ : ಆರೋಪಿ ಪರಾರಿ
( Cylinder explosion in Udupi, killing two )