ಸೋಮವಾರ, ಏಪ್ರಿಲ್ 28, 2025
Homekarnatakaರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ : ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ : ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ

- Advertisement -

ಬೆಂಗಳೂರು: DA Hike govt employees : ದಸರಾ, ದೀಪಾವಳಿ ನಡುವಲ್ಲೇ ರಾಜ್ಯ ಸರಕಾರ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಲಾಗಿದ್ದು, ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜುಲೈ 1, 2022 ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ .ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ( DA Hike ) ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ಎಂದು ತಿಳಿಸಿದ್ದಾರೆ.

ಇಂದು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ ನಂತರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪರಿಶಿಷ್ಟ ಜಾತಿಗಳು (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಾತಿಯನ್ನು ಹೆಚ್ಚಿಸಲು ತಮ್ಮ ಸರ್ಕಾರ ಬದ್ಧವಾಗಿದೆ” ಮತ್ತು ಶೀಘ್ರದಲ್ಲಿಯೇ ಅದರ ಅನುಷ್ಠಾನದ ಕುರಿತು ಆದೇಶವನ್ನು ಹೊರಡಿಸುತ್ತದೆ ಎಂದು ಹೇಳಿದರು.

ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ಮತ್ತು ಸುಭಾಷ್ ಬಿ ಆದಿ ಅವರ ವರದಿಗಳನ್ನು ಜಾರಿಗೆ ತರಲು ಮತ್ತು ಮೀಸಲಾತಿಯನ್ನು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ ಎಂದು ವರದಿಗಳ ಅನುಷ್ಠಾನದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯ ನಂತರ ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದರು. ಬೆಂಗಳೂರಿನ ಬೊಮ್ಮಾಯಿ ಅವರ ಅಧಿಕೃತ ನಿವಾಸ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸರ್ವಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಕರ್ನಾಟಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೋರ್ ಕಮಿಟಿಯು ಬೆಂಗಳೂರಿನಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾತಿಯನ್ನು ಹೆಚ್ಚಿಸುವಂತೆ ನಿರ್ಣಯವನ್ನು ಅಂಗೀಕರಿಸಿತು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಕೂಡ ಆದಷ್ಟು ಬೇಗ ಏರಿಕೆಯನ್ನು ಜಾರಿಗೆ ತರುವ ಕ್ರಮವನ್ನು ಖಚಿತಪಡಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ಅವರು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ರಾಜ್ಯದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿಯನ್ನು 50% ಮೀರಿ ವಿಸ್ತರಿಸಲು ಕೋರಿದ್ದಾರೆ, ಇದನ್ನು ದೇಶದ ಇತರ ಒಂಬತ್ತು ರಾಜ್ಯಗಳಲ್ಲಿ ಮಾಡಲಾಗಿದೆ. ಆಯೋಗವು ಈ ಸಮುದಾಯಗಳಿಗೆ ಕೋಟಾವನ್ನು ಹೆಚ್ಚಿಸಲು ಶಿಫಾರಸು ಮಾಡಿದೆ – SC 3% ರಿಂದ 7%, ಮತ್ತು ST 15% ರಿಂದ 17% ಕ್ಕೆ ಏರಿಕೆಯಾಗಲಿದೆ.

ಇದನ್ನೂ ಓದಿ : Dussehra schools Holiday extended : ಶಾಲೆಗಳಿಗೆ ಮಧ್ಯಂತರ (ದಸರಾ) ರಜೆ ಅಕ್ಟೋಬರ್‌ 31ರ ವರೆಗೆ ವಿಸ್ತರಣೆ

ಇದನ್ನೂ ಓದಿ : Medical College : ವೈದ್ಯಕೀಯ ಕಾಲೇಜುಗಳಿಂದ ಶುಲ್ಕ ಏರಿಕೆ ಪ್ರಸ್ತಾಪ: ವಿದ್ಯಾರ್ಥಿಗಳಿಗೆ ಕಾದಿದೆ ಶಾಕ್

DA Hike CM Bommai give good news to state govt employees

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular