Dakshina Kannada School Holiday July 18 : ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 18 ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಐದು ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (Mullai Mugilan) ಅವರು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಣೆ ಮಾಡಲಾಗಿದೆ. ಆದರೆ ಮಂಗಳೂರು ಹಾಗೂ ಮೂಡಬಿದಿರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿಲ್ಲ.
ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಗಲಿದೆ 5 ಲಕ್ಷ ರೂ. ಯೋಜನೆ : ಅರ್ಜಿ ಸಲ್ಲಿಸುವುದು ಹೇಗೆ ?
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 18 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಾಲೆಗಳಿಗೆ ರಜೆ ನೀಡದೇ ಇರುವ ತಾಲೂಕುಗಳಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ. ದುರ್ಬಲ ಅಥವಾ ಶಿಥಿಲ ಗೊಂಡಿರುವ ಕಟ್ಟಡಗಳಲ್ಲಿ ಪಾಠ, ಪ್ರವಚನಕ್ಕೆ ಬಳಸುವಂತಿಲ್ಲ. ಈ ಕುರಿತು ಶಾಲಾ ಮುಖ್ಯಸ್ಥರು ಕ್ರಮವಹಿಸಬೇಕಾಗಿದೆ.

ಇದನ್ನೂ ಓದಿ : ಪವಾಡ ಸೃಷ್ಟಿಸೋ ಕಮಲಶಿಲೆಯ ಸುಪಾರ್ಶ್ವ ಗುಹೆ : ಕಾಶಿ- ರಾಮೇಶ್ವರಕ್ಕೂ ಸಂಪರ್ಕ, ಮಣ್ಣಿನ ಹರಿಕೆಯೇ ಸಂಪ್ರೀತ
ಜಿಲ್ಲೆಯಾದ್ಯಂತ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯುವಂತಿಲ್ಲ. ತಗ್ಗುಪ್ರದೇಶ, ನದಿ, ಸಮುದ್ರ ತೀರದಲ್ಲಿ ವಾಸಿಸುವ ಜನರು ಎಚ್ಚರಿಕೆ ಇರುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ಪ್ರಾಕೃತಿಕ ವಿಕೋಪಗಳು ಸಂಬಂಧಿಸಿದಲ್ಲಿ ಪಂಚಾಯತ್ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : 7ನೇ ವೇತನ ಆಯೋಗ ವರದಿ ಜಾರಿ : ಸರಕಾರಿ ನೌಕರರ ವೇತನದಲ್ಲಿ ಎಷ್ಟು ಹೆಚ್ಚಳ ? ಇಲ್ಲಿದೆ ಸಂಪೂರ್ಣ ಮಾಹಿತಿ
Dakshina Kannada School Holiday July 18 Heavy Rain Red Alert Declared Dc Mullai Mugilan