ಬೆಳಗಾವಿ : Delay in flight take off: ಆಹಾರ, ನಾಗರಿಕ ಸರಬರಾಜು ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿರುವ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗ್ತಿದೆ. ಆದರೆ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಿಮಾನವನ್ನು ಟೇಕಾಫ್ ಮಾಡಲು ಅನುಮತಿ ಸಿಗದ ಕಾರಣ ಉಮೇಶ್ ಕತ್ತಿ ಅಂತ್ಯಕ್ರಿಯೆಯಲ್ಲಿ ವಿಳಂಬ ಉಂಟಾಗುವ ಸಾಧ್ಯತೆಯಿದೆ .
ಬೆಳಗಾವಿಗೆ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ಏರ್ಲಿಫ್ಟ್ ಮಾಡಲು ಚೆನ್ನೈನಿಂದ ವಿಶೇಷ ವಿಮಾನವು ಆಗಮಿಸಲಿದೆ ಎಂದು ಹೇಳಲಾಗಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಚೆನ್ನೈನಿಂದ ವಿಶೇಷ ವಿಮಾನವು ಬೆಂಗಳೂರಿಗೆ ಆಗಮಿಸುವುದು ರದ್ದಾಗಿದ್ದು ಇದರ ಬರಲು ಹೈದರಾಬಾದ್ನಿಂದ ವಿಶೇಷ ವಿಮಾನವು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಇದೇ ವಿಶೇಷ ವಿಮಾನದ ಮೂಲಕ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ರವಾನೆಯಾಗಲಿದೆ.
ಪ್ರಸ್ತುತ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಇಲ್ಲಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್. ಸಚಿವ ಎಂಟಿಬಿ ನಾಗರಾಜ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಉಮೇಶ್ ಕತ್ತಿ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ.
ಆಹಾರ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆಯನ್ನು ಬೆಳಗಾವಿಯಲ್ಲಿ ನಡೆಸಲು ಈಗಾಗಲೇ ಸಿದ್ದತೆಗಳು ನಡೆದಿದೆ.ಅಂತಿಮ ದರ್ಶನದಲ್ಲಿ ಭಾಗಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಅನೇಕರು ಬೆಳಗಾವಿಗೆ ತೆರಳಲಿದ್ದಾರೆ.
ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ದಿನಗಳ ಕಾಲ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ.ಬೆಳಗಾವಿ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ -ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದೊಗೆ ಉಮೇಶ್ ಕತ್ತಿ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸುವಂತೆ ಸರ್ಕಾರ ಆದೇಶ ನೀಡಿದೆ.
ಇದನ್ನು ಓದಿ : Ravindra Jadeja Surgery Success : ರವೀಂದ್ರ ಜಡೇಜ ಆಪರೇಷನ್ ಸಕ್ಸಸ್, ಟಿ20 ವಿಶ್ವಕಪ್ ಆಡುವುದು ಡೌಟ್
ಇದನ್ನೂ ಓದಿ : Minister Umesh Katti : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಜಗದೀಶ್ ಶೆಟ್ಟರ್,ಬಸವರಾಜ ಹೊರಟ್ಟಿ ಸಂತಾಪ
Delay in flight take off: Umesh Katthi’s funeral may be delayed