Dharmasthala New police station: ಧರ್ಮಸ್ಥಳ ಪೊಲೀಸ್‌ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

ಧರ್ಮಸ್ಥಳ : (Dharmasthala New police station) ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್‌ ಠಾಣೆಯ ನೂತನ ಕಟ್ಟಡದ ಉದ್ಘಾಟನೆಗೊಂಡಿದೆ. ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ ಧರ್ಮಸ್ಥಳ ಠಾಣೆಗೆ ನೂತನ ಕಟ್ಟಡದ ಬೇಡಿಕೆ ಇರಿಸಿದ್ದು, ಉತ್ತಮ ವಿನ್ಯಾಸ ರಚಿಸಿದಾಗ ಹೆಗ್ಗಡೆಯವರು ಅದನ್ನು ಇಷ್ಟಪಟ್ಟಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಮೊದಲ ಖಾಸಗಿ ವಿನ್ಯಾಸದ ಪೊಲೀಸ್‌ ಠಾಣೆಯಾಗಿ ಧರ್ಮಸ್ಥಳದ ನೂತನ ಪೊಲೀಸ್‌ ಠಾಣೆ ಮೂಡಿಬಂದಿದೆ. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು, “ದೇಶದಲ್ಲೇ ಅತ್ಯಂತ ಹೆಸರುವಾಸಿಯಾದ ಕ್ಷೇತ್ರ ಧರ್ಮಸ್ಥಳ ಕ್ಷೇತ್ರ. ಕ್ಷೇತ್ರಕ್ಕೆ ಧರ್ಮದೇವತೆಗಳು ರಕ್ಷಕರಾದರೆ ಕ್ಷೇತ್ರಕ್ಕೆ ಬರುವ ಭಕ್ತರನ್ನು ರಕ್ಷಿಸಿ ಅಧರ್ಮಕ್ಕೆ ಶಿಕ್ಷೆಯನ್ನು ವಿಧಿಸುವವರು ಪೊಲೀಸರು. ಧರ್ಮ ಸಂಸ್ಥಾಪನೆಗೆ ನಿರ್ಭೀತ ವಾತಾವರಣ ಸೃಷ್ಟಿಯಾದಲ್ಲಿ ಆ ದೇಶ ಸುಭಿಕ್ಷೆಯಿಂದಿರುತ್ತದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದ ಎಸ್‌ ಪಿ ಡಾ. ವಿಕ್ರಮ್‌ ಅಮಟೆ ಕಾರ್ಯಕ್ರಮವನ್ನು ಸ್ವಾಗತಿಸಿದ್ದು, ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ಪ್ರತಾಪ್‌ ಸಿಂಗ್‌ ಥೋರಟ್‌ ಕಾರ್ಯಕ್ರಮವನ್ನು ವಂದಿಸಿದರು. ಇನ್ನೂ ಈ ಕಾರ್ಯಕ್ರಮದ ನಿರ್ವಹಣೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಶ್ರೀನಿವಾಸ್‌ ರಾವ್‌ ವಹಿಸಿಕೊಂಡಿದ್ದರು. ಇನ್ನೂ ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ವಿಧಾನ ಪರಿ಼ತ್‌ ಸದಸ್ಯ ಕೆ ಪ್ರತಾಪಸಿಂಹ ನಾಯಕ, ಧರ್ಮಸ್ಥಳ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಬೆಳ್ತಂಗಡಿ ಠಾಣೆಯ ಪೊಲೀಸ್‌ ನಿರೀಕ್ಷಕ ಕೆ. ಸತ್ಯನಾರಾಯಣ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್‌ ಹಾಗೂ ಧರ್ಮಸ್ಥಳ ಠಾಣೆ ಎಸ್‌ಐ ಅನಿಲ್‌ ಕುಮಾರ್‌ ಉಪಸ್ಥಿತರಿದ್ದರು

ಇದನ್ನೂ ಓದಿ : Malini Mallya : ಕೋಟ ಶಿವರಾಮ ಕಾರಂತರ ಆಪ್ತ ಸಹಾಯಕಿ, ಕಾದಂಬರಿಗಾರ್ತಿ ಮಾಲಿನಿ ಮಲ್ಯ ವಿಧಿವಶ

ಇದನ್ನೂ ಓದಿ : ದೇಗುಲದ ಪ್ರಸಾದ ಕವರ್‌ ನಲ್ಲಿ ಪತ್ತೆಯಾಯ್ತು ಕಂತೆ ಕಂತೆ ಹಣ

ಇದನ್ನೂ ಓದಿ : ಭದ್ರಗಿರಿಯಿಂದ ಮಾಬುಕಳ ವರೆಗೆ ಸರ್ವಿಸ್‌ ರಸ್ತೆಗೆ ಆಗ್ರಹ : ಬ್ರಹ್ಮಾವರದಲ್ಲಿ ಬೃಹತ್‌ ಪ್ರತಿಭಟನೆ

Dharmasthala New police station: Inauguration of new building of Dharmasthala police station

Comments are closed.