ಧಾರವಾಡ : ರಾಜ್ಯದಲ್ಲಿ ಕೊರೊನಾ ವೈರಸ್ (Coronavirus) ಸೋಂಕು ಕಡಿಮೆಯಾಯ್ತು ಎಂದು ನಿಟ್ಟುಸಿರುವ ಬಿಡುವ ಹೊತ್ತಲ್ಲೇ ಇದೀಗ ಒಂದೇ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಧಾರವಾಡದ ಸತ್ತೂರು ಬಡಾವಣೆಯಲ್ಲಿರುವ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಲೇಜಿನಲ್ಲಿನ ಸುಮಾರು 300 ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್‌ಗೆ ಒಳಪಡಿಸಿದ ವೇಳೆಯಲ್ಲಿ ಸುಮಾರು 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಉಳಿದ 200 ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗುತ್ತಿದೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಕಾಲೇಜಿಗೆ ಭೇಟಿ ನೀಡಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ರತ್ನಮಾಲಾ ಅವರ ಜೊತೆ ಚರ್ಚೆಯನ್ನು ನಡೆಸಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಪಾರಿಜಾತ ಮಹಿಳಾ ಹಾಸ್ಟೆಲ್‌ನ್ನು ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಅಶೋಕ್ ಹಾಸ್ಟೆಲ್‌ನಲ್ಲಿಯೂ ಏಳು ಮಂದಿ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಸೀಲ್‌ಡೌನ್ ಮಾಡುವ ಸಾಧ್ಯತೆಯಿದೆ. ಕಾಲೇಜಿನಲ್ಲಿನ ಎಲ್ಲಾ ವಿದ್ಯಾರ್ಥಿಗಳೂ ಕೂಡ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದರು. ಆದರೂ ಕೂಡ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇದನ್ನೂ ಓದಿ : ವಸತಿ ಶಾಲೆಗೆ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು
ಇದನ್ನೂ ಓದಿ : ಹೊಸ ಲಾಕ್‌ಡೌನ್ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರಕಾರ
(66 Students tested positive for coronavirus in SDM Medical College Dharwad)