ಆಟೋ, ಟ್ಯಾಕ್ಸಿ ಚಾಲಕರ ಖಾತೆಗೆ ನೇರ ಪಾವತಿ : ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ ?

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಯ ಹಿನ್ನೆಲೆಯಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ 3 ಸಾವಿರ ರೂಪಾಯಿ ಸಹಾಯಧನ ಘೋಷಣೆ ಮಾಡಿದೆ. ಈ ಬಾರಿ ಚಾಲಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲು ಸರಕಾರ ಸಿದ್ದತೆಯನ್ನು ನಡೆಸಿದೆ.

ರಾಜ್ಯ ಸರಕಾರ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 12000 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅದ್ರಲ್ಲೂ ಆಟೋ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಘೋಷಣೆ ಮಾಡಲಾಗಿರುವ ಸಹಾಯಧನವನ್ನು ವಿತರಣೆ ಮಾಡಲು ಸಿದ್ದತೆ ನಡೆದಿದೆ. ಪರಿಹಾರ ಧನ ನೀಡಲು ಸೇವಾಸಿಂಧು ವೆಬ್‍ ಪೋರ್ಟಲ್‍ ಮೂಲಕ ಅರ್ಜಿ ಸ್ವೀಕರಿಸಲು ಅಗತ್ಯವಾಗಿರುವ ತಂತ್ರಾಂಶವನ್ನು ಸಿದ್ದಪಡಿಸಲಾಗುತ್ತಿದೆ. ಎಲ್ಲಾ ಚಾಲಕರು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಚಾಲಕರು ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಅವರ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾವಣರ ಮಾಡಲಾಗುತ್ತದೆ. ಈ ಬಾರಿ ಪಾರದರ್ಶಕತೆ ಯನ್ನು ಅನುಸರಿಸುವ ನಿಟ್ಟಿನಲ್ಲಿ ಕೇವಲ ಆನ್ ಲೈನ್ ಮೂಲಕವಷ್ಟೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ತಂತ್ರಾಂಶ ಅಳವಡಿಕೆಯಾದ ನಂತರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Comments are closed.