Congress Guarantees: ಕಾಂಗ್ರೆಸ್ ಸರ್ಕಾರದಿಂದ 7ನೇ ಗ್ಯಾರಂಟಿ ಘೋಷಣೆ!
DK ShCongress Guarantees : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 7ನೇ ಗ್ಯಾರಂಟಿ ಘೋಷಿಸಿದ್ದಾರೆ. ಪಂಚ ಗ್ಯಾರಂಟಿಯಿಂದ ಮನೆ ಮಾತಾಗಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ 6ನೇ ಗ್ಯಾರಂಟಿ ಘೋಷಿಸಿತ್ತು. ಇದೀಗ ಡಿಕೆ ಶಿವಕುಮಾರ್ ಅವರು 7ನೇ ಗ್ಯಾರಂಟಿ ಘೋಷಿಸಿದ್ದಾರೆ. ಈ ಕುರಿತು ಅವರು X ನಲ್ಲಿ ಪೋಸ್ಟ್ ಮಾಡಿದ್ದು, ಅನ್ನದಾತರಿಗೆ ಭರ್ಜರಿ ಶುಭಸುದ್ದಿ ನೀಡಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ 74 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಈ ಕುರಿತು ಘೋಷಣೆ ಮಾಡಿದ್ದಾರೆ.
Congress Guarantees: ಘೋಷಣೆಯ ಮುಖ್ಯಾಂಶಗಳು ಹೀಗಿವೆ:
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ಭೂ ಒಡೆತನವನ್ನು ಆರನೇ ಗ್ಯಾರಂಟಿಯಾಗಿ, ಏಳನೇ ಗ್ಯಾರಂಟಿಯಾಗಿ ರೈತರಿಗೆ ನೀರನ್ನು ನೀಡುತ್ತಿದ್ದೇವೆ.
ಗಂಗಾ ಸ್ನಾನ ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾನದಿ ನೀರು ಕುಡಿಯುವುದಕ್ಕೆ ಅಷ್ಟು ಪವಿತ್ರವಾದುದು. ಅಂತಹ ನೀರನ್ನು ಜನರ ಉಪಯೋಗಕ್ಕಾಗಿ ಕೆರೆಗಳಿಗೆ ಹರಿಸುತ್ತಿದ್ದೇವೆಎಂದು ಅವರು ತಿಳಿಸಿದ್ದಾರೆ.
ಕೆರೆಗಳಿಗೆ ನೀರು ಹರಿಸಲು 800 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಈಗಾಗಲೇ ವೆಚ್ಚ ಮಾಡಲಾಗಿದೆ. ಎಲ್ಲಾ ಕೆರೆಗಳನ್ನು ತುಂಬಿಸುವ ಸಲುವಾಗಿ ವಾರ್ಷಿಕ ವಿದ್ಯುತ್ ವೆಚ್ಚವೇ 80 ಲಕ್ಷ ರೂಪಾಯಿ ತಲುಪುತ್ತದೆ.
ಸರ್ಕಾರವು ಒಂದೆರಡು ವರ್ಷ ಈ ವೆಚ್ಚವನ್ನು ಭರಿಸಬಹುದು. ಆದ ಕಾರಣಕ್ಕೆ ಎಲ್ಲಾ ಕೆರೆಗಳನ್ನು ಮೀನುಗಾರಿಕೆ ನಡೆಸಲು ಹರಾಜು ಹಾಕಬೇಕು. ಈ ಮೂಲಕ ವೆಚ್ಚವನ್ನು ಸರಿದೂಗಿಸಬೇಕು ಎಂದು ಹೇಳಿದ್ದೇನೆ. ಇದರಿಂದ ಎಲ್ಲಾ ರೈತರಿಗೆ ಅನುಕೂಲವಾಗಲಿದೆ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
ಎನ್.ಟಿ.ಬೊಮ್ಮಣ್ಣ ಹಾಗೂ ನಾನು ಬಂಗಾರಪ್ಪನವರ ಶಿಷ್ಯರು. ವಿ.ಎಸ್.ಉಗ್ರಪ್ಪ ಅವರು ಸಂಸದ ಸ್ಥಾನಕ್ಕೆ ನಿಂತಿದ್ದಾಗ ಬೊಮ್ಮಣ್ಣ ಅವರು 74 ಕೆರೆಗಳನ್ನು ತುಂಬಿಸುವಂತೆ ಮನವಿ ಮಾಡಿದ್ದರು.
ನನ್ನ ಸ್ನೇಹಿತರಾದ ನಿಮ್ಮ ಕೆಲಸವನ್ನು ಖಂಡಿತವಾಗಿ ನಾನು ಮಾಡಿಕೊಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅಂದು ಕೊಟ್ಟ ಮಾತು ಇಂದು ಈಡೇರಿದೆ. ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸಿ 1.76 ಲಕ್ಷ ಜನರ ಬದುಕಿಗೆ ನೆರವಾಗಿದ್ದೇವೆ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಬ್ಯುಸಿನೆಸ್ ಮಾಡಲು ಇಲ್ಲಿ ಸಿಗುತ್ತೆ ಹಣ!
ಕರುನಾಡಿನ ಜನರ ಸೇವೆಯನ್ನು ಉತ್ತಮ ಸರ್ಕಾರ ಮುನ್ನಡೆಸುತ್ತಿದೆ. ಭವಿಷ್ಯದಲ್ಲಿ ಇದಕ್ಕಿಂತ ಉತ್ತಮ ಆಡಳಿತ ನೀಡುತ್ತೇವೆ. 2028 ಕ್ಕೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ನಿಮ್ಮ ಸೇವೆ ಮಾಡಲಿದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.



