Leopard In Bangalore : ಬೆಂಗಳೂರಲ್ಲಿ ಚಿರತೆ ಪ್ರತ್ಯಕ್ಷ, ಸೆರೆ ಹಿಡಿಯಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ

Leopard In Bangalore : ನಿನ್ನೆ ಬೆಂಗಳೂರಿನ ಕೂಡ್ಲು ಗೇಟ್‌ ಬಳಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಆದರೆ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ಬಂದಿದೆ. ಅರಣ್ಯ ಇಲಾಖೆಯ ಮೂರು ತಂಡಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿವೆ.

Leopard In Bangalore : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ (Forest Department) ಅಧಿಕಾರಿಗಳು ಬೆಂಗಳೂರಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆಯ  ಸಚಿವ ಈಶ್ವರ್‌ ಖಂಡ್ರೆ (Eshwar khandre) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿನ ಜನರು ಎಚ್ಚರಿಕೆಯಿಂದ ಇರಬೇಕು. ಆದರೆ ಯಾವುದೇ ಕಾರಣಕ್ಕೂ ಜನರು ಭಯಪಡುವುದು ಬೇಡಾ. ಚಿರತೆ ಎಲ್ಲಿ ಇದೆ ಅನ್ನುವ ಕುರಿತು ನಿಖರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದಿದ್ದಾರೆ.

Drone Camera Thermal Camera latest technology to capture leopard in Bengalore Forest Minister Eshwar Khan
Image credit to Original Source

ನಿನ್ನೆ ಬೆಂಗಳೂರಿನ ಕೂಡ್ಲು ಗೇಟ್‌ ಬಳಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಆದರೆ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ಬಂದಿದೆ. ಅರಣ್ಯ ಇಲಾಖೆಯ ಮೂರು ತಂಡಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿವೆ. ಚಿರತೆಯ ಗುರುತುಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ಮತ್ತೊಂದು ಅಗ್ನಿದುರಂತ : ಸುಟ್ಟು ಕರಕಲಾದ ಖಾಸಗಿ ಬಸ್‌ಗಳು

ಇನ್ನು ಚಿರತೆಯನ್ನು ಸೆರೆ ಹಿಡಿಯುವ ಸಲುವಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅರಣ್ಯ ಇಲಾಖೆ ಬಳಕೆ ಮಾಡುತ್ತಿದೆ. ಡ್ರೋಲ್‌ ಕ್ಯಾಮರಾ, ಥರ್ಮಲ್‌ ಕ್ಯಾಮೆರಾ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಜನರು ಕೂಡ ಈ ಕಾರ್ಯಾಚರಣೆಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲ ಬೊಮ್ಮನಹಳ್ಳಿ, ಎಚ್‌ಎಸ್‌ಆರ್‌ ಲೇಔಟ್‌, ಬಿಟಿಎಂ ಲೇಔಟ್‌ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಜನರು ಒಬ್ಬಂಟಿಯಾಗಿ ಈ ಭಾಗದಲ್ಲಿ ಒಬ್ಬಂಟಿಯಾಗಿ ಓಡಾಟ ನಡೆಸದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ.

ಇದನ್ನೂಓದಿ : ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೊಮ್ಮನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಕುರಿತು ವಿಡಿಯೋವೊಂದು ವೈರಲ್‌ ಆಗಿತ್ತು. ವಿಡಿಯೋ ನೋಡಿದ ಜನರು ಆತಂಕಕ್ಕೆ ಒಳಗಾಗಿದ್ದರು. ವಿಡಿಯೋದಲ್ಲಿ ನಾಯಿಗಳು ಚಿರತೆಯನ್ನು ಓಡಿಸಿಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಈ ವಿಡಿಯೋ ವೈರಲ್‌ ಆಗಿರುವ ಬೆನ್ನಲ್ಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

Drone Camera Thermal Camera latest technology to capture leopard in Bengalore Forest Minister Eshwar Khan
Image credit to Original Source

ಎಲೆಕ್ಟ್ರಾನಿಕ್‌ ಸಿಟಿ, ಬೆಂಗಳೂರು ದಕ್ಷಿಣ ಭಾಗದಲ್ಲಿಯೂ ಚಿರತೆಗಳ ಸಂಚಾರದ ಕುರುಹುಗಳು ಈ ಹಿಂದೆಯೇ ಪತ್ತೆಯಾಗಿತ್ತು. ಇದೀಗ ಬೊಮ್ಮನಹಳ್ಳಿಯ ಸಮೀಪದಲ್ಲಿ ಪತ್ತೆಯಾಗಿರುವ ಚಿರತೆಯ ಕುರುಹು ಬಗ್ಗೆ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಈ ಚಿರತೆ ಎಲ್ಲಿಂದ ಬಂದಿರಬಹುದು ಅನ್ನೋ ನಿಟ್ಟಿನಲ್ಲಿಯೂ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ನಮ್ಮ ಮೆಟ್ರೋ ದಾಖಲೆ : ಒಂದೇ ದಿನ 7 ಲಕ್ಷ ಮಂದಿ ಪ್ರಯಾಣಿಕರಿಂದ ಪ್ರಯಾಣ

Drone Camera Thermal Camera latest technology to capture leopard in Bengalore, Forest Minister Eshwar Khan

Comments are closed.