ಬೆಂಗಳೂರು-ಮೈಸೂರು ಇ-ಹೈವೇಯಲ್ಲಿ ಇಂದಿನಿಂದಲೇ ಟೋಲ್‌ ಸಂಗ್ರಹ: ಭಾರೀ ವಿರೋಧದ ನಡುವೆಯೂ ಟೋಲ್‌ ಅರಂಭ

ರಾಮನಗರ: (e-highway toll launch) ಮಾರ್ಚ್‌ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹು ನಿರೀಕ್ಷಿತ ಬೆಂಗಳೂರು-ಮೈಸೂರು ಇ-ಹೈವೇಯನ್ನು ಲೋಕಾರ್ಪಣೆ ಮಾಡಿದ್ದು, ಲೋಕಾರ್ಪಣೆ ಬೆನ್ನಲ್ಲೇ ಇ-ಹೈವೇಯಲ್ಲಿ ಟೋಲ್‌ ಸಂಗ್ರಹ ಪ್ರಾರಂಭವಾಗಿದೆ. ಇಂದಿನಿಂದಲೇ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹವಾಗುತ್ತಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಹಿಂದೆ ಟೋಲ್‌ ಸಂಗ್ರಹಕ್ಕೆ ವಿವಿಧ ಸಂಘಟನೆಗಳು ಟೋಲ್‌ ಸಂಗ್ರಹಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇಂದು ಕೂಡ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಈ ಕಾರಣಕ್ಕೆ ಟೋಲ್‌ ಗೇಟ್‌ ಗಳಲ್ಲಿ ಬಿಗಿ ಪೊಲೀಸರ ಭದ್ರತೆ ನೀಡಲು ಮನವಿ ಮಾಡಲಾಗಿದೆ. ಭದ್ರತೆಗಾಗಿ ಇನ್ನೂರು ಪೊಲೀಸರ ನಿಯೋಜನೆ ಮಾಡಲಾಗಿದೆ. ಇಂದಿನಿಂದಲೇ ಮೊದಲ ಹಂತದ ಟೋಲ್ ಸಂಗ್ರಹ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತದೆ.

ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ. ಹಾಲಿನ ಕ್ಯಾನ್​ ಹಿಡಿದು, ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ. ಇನ್ನೂ ಪ್ರಯಾಣಿಕರು ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ಟೆಕ್ನಿಕಲ್ ಎರರ್ ಆಗುತ್ತಿದೆ. ಫಾಸ್ಟ್ಯಾಗ್ ಇದ್ರೂ ಟೋಲ್ ಪ್ಲಾಜಾ ಸ್ಕ್ಯಾನ್ ತೆಗೆದುಕೊಳ್ಳುತ್ತಿಲ್ಲ. ಸ್ಕ್ಯಾನ್ ಆಗೋದ್ರಲ್ಲಿ ವಿಳಂಬವಾಗುತ್ತಿದೆ. ಸ್ಕ್ಯಾನ್ ಆಗಿ ವಾಹನ ಚಲಿಸುವಾಗಲೇ ವಾಹನದ ಮೇಲೆ ಕಂಬಿ ಬೀಳುತ್ತಿದೆ. ಈ ಕಾರಣಕ್ಕೆ ಪ್ರಯಾಣಿಕರು ಕೂಡ ಟೋಲ್‌ ಗೇಟ್‌ ಪ್ರಾಧಿಅಕರ ಮೇಲೆ ಗರಂ ಆಗಿದ್ದು, ಸಿದ್ದತೆಯಿಲ್ಲದೇ ಟೋಲ್‌ ತೆಗೆದುಕೊಳ್ಳುವುದು ಎಷ್ಟು ಸರಿ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಯಾವುದಕ್ಕೆ ಎಷ್ಟು ಶುಲ್ಕ?
ಕಾರು, ಜೀಪ್​​, ವ್ಯಾನ್​ಗೆ ಏಕಮುಖ ಸಂಚಾರಕ್ಕೆ 135 ರೂ., ಎರಡು ಕಡೆ ಸಂಚಾರಕ್ಕೆ 205 ರೂ., ತಿಂಗಳ ಪಾಸ್​​ ದರ 4,425 ರೂ.
ಸ್ಥಳೀಯ ವಾಹನಗಳ ಏಕಮುಖ ಸಂಚಾರಕ್ಕೆ 70 ರೂ. ನಿಗದಿ
ಲಘು ಸರಕುವಾಹನ, ಮಿನಿ ಬಸ್​ಗಳ ಏಕಮುಖ ಸಂಚಾರಕ್ಕೆ 220 ರೂ., ಎರಡು ಕಡೆ ಸಂಚಾರಕ್ಕೆ 330 ರೂ., ಲಘು ಸರಕುವಾಹನ, ಮಿನಿ ಬಸ್​ಗಳಿಗೆ ತಿಂಗಳ ಪಾಸ್​ ದರ 7315 ರೂ
ಟ್ರಕ್‌/ಬಸ್‌ ಏಕಮುಖ ಸಂಚಾರಕ್ಕೆ ಟೋಲ್​ ದರ 460 ರೂ. ನಿಗದಿ., ಎರಡು ಕಡೆ ಸಂಚಾರಕ್ಕೆ 690 ರೂಪಾಯಿ ನಿಗದಿ, ತಿಂಗಳ ಟೋಲ್ ಪಾಸ್​ ದರ 15,325 ರೂ. ನಿಗದಿ
3 ಆಕ್ಸೆಲ್‌ ವಾಣಿಜ್ಯ ವಾಹನ ಏಕಮುಖ ಸಂಚಾರ 500 ರೂ., ಎರಡು ಕಡೆ 750 ರೂ.
ಅತಿ ಭಾರದ ವಾಹನಗಳು ಏಕಮುಖ ಸಂಚಾರಕ್ಕೆ 880 ರೂ. ನಿಗದಿ., ಎರಡು ಕಡೆ ಸಂಚಾರಕ್ಕೆ 1315 ರೂ. ದರ ನಿಗದಿ

ಇದನ್ನೂ ಓದಿ : Bengaluru-Mysuru E-way: ಬೆಂಗಳೂರು-ಮೈಸೂರು ಇ-ವೇ, ಐಐಟಿ ಧಾರವಾಡ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

e-highway toll launch: Toll collection on Bengaluru-Mysore e-highway from today: Toll launch despite heavy opposition

Comments are closed.