ಕಲಬುರಗಿ : ಕೆಲವು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಭೂಮಿಯ ಒಳಗಿನಿಂದ ಕೇಳಿಬಂದ ಶಬ್ದಕ್ಕೆ ಜನರು ಬೆಚ್ಚಿ ಬಿದ್ದು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ, ಕೆರಳ್ಳಿ ಸೇರಿದಂತೆ ಸುಮಾರು 30ಕ್ಕೂ ಅಧಿಕ ಗ್ರಾಮಗಳಲ್ಲಿ ಭೂ ಕಂಪನದ ಅನುಭವವಾಗಿದೆ. ಇಂದು ಸಂಜೆ 7 ಗಂಟೆಯ ಸುಮಾರಿಗೆ ಬಾರೀ ಸದ್ದು ಕೇಳಿಬಂದಿದೆ. ಹಲವೆಡೆಗಳಲ್ಲಿ ಭೂಕಂಪನದ ಅನುಭವವಾಗಿದೆ.
ಭಾರೀ ಸದ್ದು ಕೇಳಿಬರುತ್ತಿದ್ದಂತೆಯೇ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದು, ಹಲವು ಗ್ರಾಮಗಳಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಆದರೆ ಭೂಕಂಪನ ಸಂಭವಿಸಿದೆಯಾ ಅನ್ನೋ ಬಗ್ಗೆ ಇನ್ನೂ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಭಾರೀ ಸದ್ದು ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಇದನ್ನೂ ಓದಿ : ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್ : ಗಡಿ ಜಿಲ್ಲೆಗಳಲ್ಲಿ ರೂಲ್ಸ್ ಇನ್ನಷ್ಟು ಟೈಟ್
ಇದನ್ನೂ ಓದಿ : Thunderstorm : ಸಿಡಿಲು ಬಡಿದು ಉಡುಪಿಯಲ್ಲಿ ತಂದೆ, ಮಗ ಗಂಭೀರ