Electricity bill: ಹೊಸ ವರ್ಷದ ಹೊಸ್ತಿಲಲ್ಲಿ ಸರ್ಕಾರದಿಂದ ಗುಡ್ ನ್ಯೂಸ್; ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ

ಬೆಂಗಳೂರು: Electricity bill: ಒಂದೆಡೆ ಹೊಸ ವರ್ಷ, ಮತ್ತೊಂದೆಡೆ ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯ ಜನತೆಗೆ ಗುಡ್ ನ್ಯೂಸ್ ನೀಡಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಹಾಗೂ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ವತಿಯಿಂದ ಗ್ರಾಹಕರಿಗೆ ಹೊಸ ವರ್ಷದ ಗಿಫ್ಟ್ ನೀಡಲಾಗಿದ್ದು, ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಇಂಧನ ಸಚಿವ ಸುನೀಲ್ ಕುಮಾರ್ ಅವರು ಟ್ವೀಟ್ ಮಾಡುವ ಮೂಲಕ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದೆ. ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Reservation: ಮೀಸಲಾತಿ ಬೇಡಿಕೆ ಪರಿಹರಿಸಲು ಸರ್ಕಾರದ ಹೊಸ ತಂತ್ರ; ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ 2 ಪ್ರತ್ಯೇಕ ಕೆಟಗರಿ ರಚನೆ

ಇತ್ತೀಚೆಗಷ್ಟೆ ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದ ವಿದ್ಯುತ್ ದರ ಏರಿಕೆ ಆಗಿ ಗ್ರಾಹಕರಿಗೆ ಹೊರೆಯಾಗಿತ್ತು. ಪರಿಣಾಮ ಜನರು ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೀಗ ಹೊಸ ವರ್ಷದ ಹೊಸ್ತಿಲಿನಲ್ಲಿ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿಮೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಹೀಗಾಗಿ ಇನ್ಮುಂದೆ ವಿದ್ಯುತ್ ದರ ಕಡಿಮೆ ಆಗಲಿದ್ದು, ಗ್ರಾಹಕರಿಗೆ ಹೊರೆ ಕೊಂಚ ಕಡಿಮೆ ಆಗಲಿದೆ.

ಇದನ್ನೂ ಓದಿ: Kalasa Banduri project : ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರಕಾರ

ಇದನ್ನೂ ಓದಿ: Namma Metro : ಹೊಸ ವರ್ಷ ದಿನದಂದು ತಡರಾತ್ರಿ 2ಗಂಟೆವರೆಗೂ ಸಿಗಲಿದೆ ಮೆಟ್ರೋ

Electricity bill: New Year Gift from State Government: Bescom, Mescom reduces reduces the Electricity Bill

Comments are closed.