ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ ಸಂಕಷ್ಟ : ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ, ದೂರು ದಾಖಲು

Ex-Chief Minister BS Yeddyurappa : ಲೋಕಸಭಾ ಚುನಾವಣೆ ಸಂಭವಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (sexual harassment) ಎಸಗಿರುವ ಆರೋಪ ಕೇಳಿಬಂದಿದೆ.

Ex-Chief Minister BS Yeddyurappa : ಲೋಕಸಭಾ ಚುನಾವಣೆ ಸಂಭವಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (sexual harassment) ಎಸಗಿರುವ ಆರೋಪ ಕೇಳಿಬಂದಿದೆ. ಸದ್ಯ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ex-Chief Minister BS Yeddyurappa in trouble Complaint lodged against girl accused of sexual harassment
Image Credit to Original Source

ಫೆಬ್ರವರಿ ೩ರಂದು ಸಂತ್ರಸ್ತ ಬಾಲಕಿ ಸಹಾಯ ಕೇಳಲು ಹೋಗಿದ್ದ ಸಂದರ್ಭದಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಸದಾಶಿವ ನಗರ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೀಗ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆಯ ತಾಯಿ ಈಗಾಗಲೇ ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮಾತ್ರವಲ್ಲ, ಸುಮಾರು 53 ಮಂದಿಯ ವಿರುದ್ದ ಪ್ರಕರಣ ದಾಖಲು ಮಾಡಿದ್ದಾರೆ. ಇದರಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಒಳಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಜಾತಿಗಣತಿ ಎಂಬ ಬಿಸಿತುಪ್ಪ: ಸಿಎಂ ಸಿದ್ಧರಾಮಯ್ಯ ನಿರ್ಧಾರದ ಮೇಲೆ ನಿಂತಿದೆ ಕಾಂಗ್ರೆಸ್ ಭವಿಷ್ಯ

ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದೆ. ಈಗಾಗಲೇ ಬಿಎಸ್ ಯಡಿಯೂರಪ್ಪ ಅವರು ಟಿಕೆಟ್‌ ಹಂಚಿಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ಹೊತ್ತಲ್ಲೇ ಇದೀಗ ಬಿಎಸ್‌ ಯಡಿಯೂರಪ್ಪ ಅವರ ವಿರುದ್ದ ಪ್ರಕರಣ ದಾಖಲಾಗಿರುವುದು ತಲೆನೋವು ತರಿಸಿದೆ. ಸದ್ಯ ಯಡಿಯೂರಪ್ಪ ಅವರ ವಿರುದ್ದ ಪ್ರಕರಣ ದಾಖಲಾಗಿದ್ದು ಬಂಧನದ ಭೀತಿಯೂ ಎದುರಾಗಿದೆ.

Ex-Chief Minister BS Yeddyurappa in trouble Complaint lodged against girl accused of sexual harassment
Image Credit to Original Source

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಕೆಲವೆಡೆ ಎದುರಾಯ್ತು ಬಂಡಾಯದ ಬಿಸಿ

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.  ಮೊದಲ ಪಟ್ಟಿಯಲ್ಲಿ ಟಿಕೆಟ್‌ ಸಿಗದೇ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಕೆಎಸ್‌ ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ. ಕೆಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ : ಉತ್ತರದಲ್ಲಿ ಬಿಜೆಪಿ ದಿಗ್ವಿಜಯ : ಟ್ರೆಂಡ್‌ ಆಗ್ತಿದೆ ಮೋದಿ ಗ್ಯಾರಂಟಿ #ModiKiGuarantee

ಇನ್ನು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ದವೂ ಅಪಸ್ವರ ಕೇಳಿಬಂದಿದೆ. ಕ್ಷೇತ್ರದಲ್ಲಿ ಪ್ರಮೋದ್‌ ಮಧ್ವರಾಜ್‌, ಸಿಟಿ ರವಿ, ಡಿಎನ್‌ ಜೀವರಾಜ್‌ ಆಕಾಂಕ್ಷಿಯಾಗಿದ್ದರು. ಯುವಕರಿಗೆ ಟಿಕೆಟ್‌ ನೀಡುವ ಬದಲು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್‌ ನೀಡಿರುವುದು ಸ್ವಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಇದೇ ಕ್ಷೇತ್ರದಿಂದ ಟಿಕೆಟ್‌ ಮಿಸ್‌ ಆಗಿದೆ. ಆದರೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.  ಉಡುಪಿಯಲ್ಲಿ ಕೇಳಿ ಬಂದಿದ್ದ ಗೋ ಬ್ಯಾಕ್‌ ಕೂಗು ಇದೀಗ, ಬೆಂಗಳೂರಿನಲ್ಲಿಯೂ ಶೋಭಾ ಕರಂದ್ಲಾಜೆ ವಿರುದ್ದ ಕೇಳಿಬಂದಿದೆ.

ಇದನ್ನೂ ಓದಿ : ವಾಹನ ಸವಾರರಿಗೆ ಮೋದಿ ಭರ್ಜರಿ ಗಿಫ್ಟ್ : ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ ಬಾರೀ ಇಳಿಕೆ

Ex-Chief Minister BS Yeddyurappa in trouble: Complaint lodged against girl accused of sexual harassment

Comments are closed.