ರೈತರ ಮಕ್ಕಳಿಗೆ ಶಿಷ್ಯ ವೇತನ : 1 ಸಾವಿರ ಕೋಟಿ ಯೋಜನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿನ ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಅನ್ನೋ ಕಾರಣಕ್ಕೆ ರಾಜ್ಯ ಸರಕಾರ ರೈತರ ಮಕ್ಕಳಿಗಾಗಿ ಶಿಷ್ಯ ವೇತನವನ್ನು ಜಾರಿಗೆ ತರಲು ರಾಜ್ಯ ಸರಕಾರ ನಿರ್ಧಾರವನ್ನು ಮಾಡಿದೆ. ಇದಕ್ಕಾಗಿ ಬರೊಬ್ಬರಿ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರದಲ್ಲಿ ಅವರು ಕ್ಯಾಬಿನೆಟ್‌ ಸಭೆ ನಡೆಸಿದರು. ಸಭೆಯಲ್ಲಿ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅದರಲ್ಲೂ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿಷ್ಯ ವೇತನವನ್ನು ಜಾರಿಗೆ ತರಲಾಗುತ್ತಿದೆ. ಈ ಯೋಜನೆಗೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿಯನ್ನು ವೆಚ್ಚ ಮಾಡಲಾಗುತ್ತಿದೆ ಎಂದರು.

ಇದುವರೆಗೆ ರಾಜ್ಯದಲ್ಲಿ ರೈತರ ಮಕ್ಕಳಿಗೆ ಯಾವುದೇ ಶಿಷ್ಯ ವೇತನವನ್ನೂ ನೀಡಲಾಗುತ್ತಿರಲಿಲ್ಲ. ಆದ್ರೀಗ ರಾಜ್ಯ ಸರಕಾರ ಮೊದಲ ಬಾರಿ ರೈತರ ಮಕ್ಕಳಿಗಾಗಿ ಹೊಸ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಕುರಿತು ಮುಂದಿನ ದಿನಗಳಲ್ಲಿ ವಿಸ್ತ್ರತವಾದ ಯೋಜನೆಯೊಂದನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.

Comments are closed.