FIR against BJP district president : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಜಿಲ್ಲಾಧ್ಯಕ್ಷನ ವಿರುದ್ದ ಎಫ್‌ಐಆರ್‌ ದಾಖಲು

ಕಲಬುರಗಿ : (FIR against BJP district president) ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿದ್ದು, ಮತದಾರರನ್ನು ಸೆಳೆಯಲು ರಾಜ್ಯದೆಲ್ಲಡೆ ಪಕ್ಷಗಳು, ಟಿಕೆಟ್‌ ಆಕಾಂಕ್ಷಿಗಳು ರಣತಂತ್ರಗಳನ್ನು ರೂಪಿಸುತ್ತಿದ್ದಾರೆ. ಮತದಾರರನ್ನು ಸೆಳೆಯುವ ಭರದಲ್ಲಿ ಹಲವರು ನೀತಿ ಸಂಹಿತೆಯನ್ನು ಉಲ್ಲಂಘಿಸಿ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಚುನಾವಣೆಗೆ ಸಂಬಂಧಿಸಿದಂತೆ, ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರಚಾರ ಫಲಕಗಳಾಗಲಿ, ಜಾಹೀರಾತುಗಳಾಗಲಿ ಪ್ರಕಟಿಸುವಂತಿಲ್ಲ. ಉಲ್ಲಂಘನೆಯಾದಲ್ಲಿ ಶಾಸಕರ ವಿರುದ್ದ ಪ್ರಕರಣ ದಾಖಲಾಗುತ್ತದೆ ಎಂಬ ಸೂಚನೆಯನ್ನು ನೀಡಿತ್ತು.

ಚುನಾವಣಾ ಆಯೋಗ ಈ ಮೊದಲೇ ಸೂಚನೆ ನೀಡಿದ್ದರು ಕೂಡ ಕಲಬುರಗಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್‌ ಪಾಟೀಲ್‌ ರದ್ದೇವಾಡಗಿ ಹೆಸರಲ್ಲಿ ಕ್ರಿಕೆಟ್‌ ಪಂದ್ಯಾವಳಿ ಆಯೋಜಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷನ ವಿರುದ್ದ ಎಫ್‌ಐಆರ್‌ ದಾಖಲಿಸಲಾಗಿದೆ. ಶಿವರಾಜ್ ಪಾಟೀಲ್ ರದ್ದೇವಾಡಗಿ , ಜೇವರ್ಗಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆಂದು ತಿಳಿಯಲಾಗಿದೆ. ಚುನಾವಣಾಧಿಕಾರಿಗಳಿಗೆ ಮಾಹಿತಿ ತಿಳಿಯುತ್ತಿದ್ದಂತೆ ಶಿವರಾಜ್ ಪಾಟೀಲ್ ರದ್ದೇವಾಡಗಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : FIR against DK Sivakumar: ಚುನಾವಣೆ ಹೊತ್ತಲ್ಲೇ ಡಿಕೆಶಿ ಗೆ ಎದುರಾಯ್ತು ಸಂಕಷ್ಟ : ಕೆಪಿಸಿಸಿ ಅಧ್ಯಕ್ಷ ವಿರುದ್ದ ಎಫ್‌ಐಆರ್‌ ದಾಖಲು

ಇದನ್ನೂ ಓದಿ : ರಾಜೀನಾಮೆಗೂ ಮುನ್ನ ಕ್ಷೇತ್ರದ ಜನರನ್ನು ನೆನೆದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದಿಷ್ಟು !

ಇದಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ದ ಕೂಡ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ವೇಳೆ ಬಸ್​ ಮೇಲಿಂದ ಕಲಾವಿದರತ್ತ 500 ರೂ. ಗಳ ನೋಟುಗಳನ್ನು ಎಸೆದಿದ್ದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಆಫೀಸರ್​ ಈ ಬಗ್ಗೆ ನ್ಯಾಯಾಲಯದಲ್ಲಿ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಮಂಡ್ಯ ಪೊಲೀಸರಿಗೆ ಆದೇಶಿಸಿದ್ದು, ನ್ಯಾಯಾಲಯದ ಆದೇಶದಂತೆ ನಿನ್ನೆ(ಏಪ್ರಿಲ್ 03) ಡಿಕೆ ಶಿವಕುಮಾರ್​ ವಿರುದ್ದ ಎಫ್‌ಐ‌ಆರ್ ದಾಖಲಾಗಿದೆ.

FIR against BJP district president Violation of election code of conduct: FIR filed against BJP district president

Comments are closed.