ಮೈಸೂರು:murugha shri : ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀಗಳಿಗೆ ಒಂದಾದರ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇದೆ. ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ವಿರುದ್ಧ ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ ನಜರಾಬಾದ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಹಿಂದೆ ಮುರುಘಾ ಶ್ರೀಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎಸಗಿದ್ದ ಇಬ್ಬರು ಬಾಲಕಿಯರ ನೆರವಿಗೆ ಮೈಸೂರಿನ ಒಡನಾಡಿ ಸಂಸ್ಥೆ ನಿಂತಿತ್ತು. ಇದೀಗ ಮತ್ತೆ ನಾಲ್ವರು ಬಾಲಕಿಯರು ಮುರುಘಾ ಶ್ರೀಗಳ ವಿರುದ್ಧ ದೂರು ದಾಖಲಿಸಿದ್ದು ಈ ವಿದ್ಯಾರ್ಥಿನಿಯರಿಗೂ ಒಡನಾಡಿ ಸಂಸ್ಥೆ ನೆರವು ನೀಡಿದೆ. ನಿನ್ನೆ ತಡರಾತ್ರಿ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾ ಶ್ರೀಗಳ ವಿರುದ್ಧ ದೂರು ದಾಖಲಾಗಿದ್ದು ಈ ದೂರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲು ಸಿದ್ಧತೆಗಳು ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮುರುಘಾ ಮಠದ ಶ್ರೀಗಳಿಗೆ ಒಂದಾದರ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇದೆ. ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿರುವ ಶ್ರೀಗಳಿಗೆ ಜಾಮೀನು ನೀಡಲು ಚಿತ್ರದುರ್ಗ ನ್ಯಾಯಾಲಯ ನಿರಾಕರಿಸಿದೆ. ಇತ್ತ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ಕೂಡ ದಾಖಲಾಗಿದೆ. ಇದೀಗ ಮತ್ತೆ ನಾಲ್ವರು ವಿದ್ಯಾರ್ಥಿನಿಯರು ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಿಸಿರುವ ಹಿನ್ನೆಲೆಯಲ್ಲಿ ಶ್ರೀಗಳ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಇನ್ನಷ್ಟು ಬಲಗೊಳ್ಳುವ ಸಾಧ್ಯತೆಯಿದೆ.
ಇದನ್ನು ಓದಿ : Super 10 League : ಕ್ರಿಕೆಟ್+ಸಿನಿಮಾ: ಕಿಚ್ಚನ ಸೂಪರ್ 10 ಲೀಗ್‌ನಲ್ಲಿ ಆಡಲಿದ್ದಾರೆ ವಿಂಡೀಸ್ ದೈತ್ಯ ಕ್ರಿಸ್ ಗೇಲ್
fir against murugha shri in mysuru