Fire near helipad: ಬೈಂದೂರು : ಸಿಎಂ ಬಸವರಾಜ್ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

ಬೈಂದೂರು : (Fire near helipad) ವಿಧಾನಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 12ರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್ ರನ್ ಶುರು ಮಾಡಿದ್ದಾರೆ. ಹೀಗಾಗಿ ಉಡುಪಿಗೆ ಭೇಟಿ ನೀಡಿದ್ದು ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನಲೆ ಸಿಎಂ ಬೊಮ್ಮಾಯಿ ಅವರು ಪುಣ್ಯಕ್ಷೇತ್ರಗಳ ದರ್ಶನ ಪ್ರಾರಂಭಿಸಿದ್ದಾರೆ. ಉಡುಪಿ ದಕ್ಷಿಣ ಕನ್ನಡಕ್ಕೆ ಬೇಟಿ ನೀಡಿದ ಬೊಮ್ಮಾಯಿ ಧರ್ಮಸ್ಥಳ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಇಂದು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಹೀಗಾಗಿ ಉಡುಪಿಗೆ ಭೇಟಿ ನೀಡಿದ್ದು ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಆತಂಕ ಸೃಷ್ಟಿಯಾಗಿದ್ದು ಅದೃಷ್ಟವಶಾತ್ ಸಿಎಂ ಬೊಮ್ಮಾಯಿ ಸ್ವಲ್ಪದರಲ್ಲಿ ಬಚಾವ್ ಆಗಿದ್ದಾರೆ. ಸದ್ಯ ಈಗ ಸಿಎಂ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಕೂಡ ಇವರ ಜೊತೆ ಕಾಣಿಸಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ನಟ ರಿಷಬ್‌ ಶೆಟ್ಟಿ ದೇವಾಲಯದಲ್ಲಿ ಮುಖಾಮುಖಿಯಾಗಿದ್ದು, ಬಹಳ ಕುತೂಹಲಕ್ಕೆ ಕಾರಣವಾಗಿದೆ. ಜೊತೆಗೆ ಎಲ್ಲರ ಗಮನ ಕೂಡ ಸೆಳೆಯುತ್ತಿದೆ. ಸಿಎಂ ಬೊಮ್ಮಾಯಿ ಅವರು ಕೊಲ್ಲೂರಿಗೆ ಬರುವುದು ನಿನ್ನೆಯ ದಿನ ನಿಗಧಿಯಾಗಿದ್ದು, ಕೊಲ್ಲೂರು ಸಮೀಪದ ನಿವಾಸಿಯಾಗಿದ್ದ ರಿಷಬ್‌ ಶೆಟ್ಟಿ ಅವರು ದೇವರ ದರ್ಶನ ಕಾರಣವಾಗಿ ದೇವಸ್ಥಾನಕ್ಕೆ ಬಂದಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿದೆ.

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದ ವೇಳೆಯೇ ನಟ ರಿಷಬ್ ಶೆಟ್ಟಿ ಕೂಡ ಕುಟುಂಬ ಸಮೇತ ದೇವಿಯ ದರ್ಶನ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ನಟ ರಿಷಬ್ ಒಟ್ಟಿಗೆ ತಾಯಿ ದರ್ಶನ ಮಾಡಿದ್ದು ಬಿಜೆಪಿ ಪರ ನಟ ರಿಷಬ್​ ಶೆಟ್ಟಿ ಪ್ರಚಾರ ಮಾಡ್ತಾರೆಂದು ಹೇಳಲಾಗುತ್ತಿತ್ತು. ಆದ್ರೆ ಈ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಈವರೆಗೆ ನಟ ರಿಷಬ್​​ ಶೆಟ್ಟಿ ಜತೆ ಯಾವುದೇ ಮಾತುಕತೆ ನಡೆದಿಲ್ಲ. ಮೂಕಾಂಬಿಕೆ ಏನು ಎಂಬ ಆಶೀರ್ವಾದ ಕೊಡುತ್ತಾಳೆ ನೋಡೋಣ. ನಮ್ಮ ಸಿದ್ಧಾಂತಕ್ಕೂ ಅವರ ಸಿದ್ಧಾಂತಕ್ಕೂ ಬಹಳ ಸಾಮ್ಯತೆ ಇದೆ. ಆಕಸ್ಮಿಕವಾಗಿ ದೇವಸ್ಥಾನದಲ್ಲಿ ನನಗೆ ನಟ ರಿಷಬ್​ ಶೆಟ್ಟಿ ಸಿಕ್ಕಿದ್ದಾರೆ. ನಾನು ಬರುವ ಮೊದಲೇ ರಿಷಬ್​ ಶೆಟ್ಟಿ ದೇವಸ್ಥಾನದಲ್ಲಿ ಇದ್ದರು. ಈ ಹಿಂದೆ ಕೂಡ ನಮ್ಮ ಸಿದ್ಧಾಂತವನ್ನು ಪ್ರತಿಪಾದನೆ ಮಾಡಿದ್ದಾರೆ. ಬಿಜೆಪಿ, ನಾಯಕತ್ವ ಬಗ್ಗೆ ರಿಷಬ್​​ ಒಲವಿರುವ ಮಾತಾಡಿದ್ದಾರೆ ಎಂದು ಕೊಲ್ಲೂರು ಮೂಕಾಂಬಿಕಾ ದೇಗುಲ ಬಳಿ ಸಿಎಂ ಬೊಮ್ಮಾಯಿ ತಿಳಿಸಿದರು

ಇದನ್ನೂ ಓದಿ : Rishabh Shetty with Bommai : ನಟ ಸುದೀಪ್‌ ಬಳಿಕ ಬಿಜೆಪಿಗೆ ಮತ್ತೊಂದು ಸ್ಟಾರ್‌ ಬಲ : ಬಿಜೆಪಿ ಪರ ಪ್ರಚಾರ ಮಾಡ್ತಾರಾ ರಿಷಬ್‌ ಶೆಟ್ಟಿ

Fire near helipad: Bynduru: Fire near the helipad where CM Basavaraj Bommai’s helicopter was landing.

Comments are closed.