ಸೋಮವಾರ, ಏಪ್ರಿಲ್ 28, 2025
HomeBUDGETFishermen Budget 2023 : ಬೈಂದೂರಿನಲ್ಲಿ ಸೀ ಪುಡ್ ಪಾರ್ಕ್ : ಬಜೆಟ್ ನಲ್ಲಿ ಮೀನುಗಾರರಿಗೆ...

Fishermen Budget 2023 : ಬೈಂದೂರಿನಲ್ಲಿ ಸೀ ಪುಡ್ ಪಾರ್ಕ್ : ಬಜೆಟ್ ನಲ್ಲಿ ಮೀನುಗಾರರಿಗೆ ಸಿಕ್ಕಿದ್ದೇನು ?

- Advertisement -

ಬೆಂಗಳೂರು : ( Fishermen Budget 2023 ): ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೀನುಗಾರರಿಗೆ ಬರಪೂರ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಸೀಪುಡ್ ಪಾರ್ಕ್ ಘೋಷಣೆ ಮಾಡಲಾಗಿದ್ದು, ಕರಾವಳಿ ಭಾಗದಲ್ಲಿ ಮೀನುಗಾರಿಕೆಯ ಸಮಗ್ರ ಅಭಿವೃದ್ದಿಗಾಗಿ ಮತ್ಸ್ಯ ಸಂಪದ ಯೋಜನೆಯನ್ನು ಜಾರಿಗೆ ತರಲಾಗಿದೆ.

ರಾಜ್ಯದಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗಾಗಿ ಬೈಂದೂರು ತಾಲ್ಲೂಕಿನ ಕಂಬದಕೋಣೆಯಲ್ಲಿ Seafood Park ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.ಕಳೆದ ಸಾಲಿನಲ್ಲಿ 10.73 ಲಕ್ಷ ಮೆಟ್ರಿಕ್‌ ಟನ್‌ ಮೀನು ಉತ್ಪಾದನೆ ಮಾಡುವ ಮೂಲಕ ಕರ್ನಾಟಕ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ. ಇದೀಗ ಮೀನುಗಾರರಿಗೆ ನೆರವಾಗಲು 62 FFPO ಗಳ ಸ್ಥಾಪನೆ ಮಾಡಲಾಗುತ್ತದೆ. ಅಲ್ಲದೇ 12,175 ಮೀನುಗಾರರಿಗೆ ಕಿಸಾನ್‌ ಕ್ರೆಡಿಟ್ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗಿದೆ. ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಮ ಪಡಿಸಲು ಕರಾವಳಿ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಪ್ರಧಾನ ಮಂತ್ರಿ ಮತ್ತ್ವ ಸಂಪದ ಯೋಜನೆಯಡಿ ಕೃತಕ ಬಂಡೆ ಸಾಲುಗಳನ್ನು (Artificial Reef) ಸ್ಥಾಪಿಸಲಾಗುತ್ತದೆ. ಉತ್ತಮ ತಳಿಯ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು (Ranching) ಪ್ರೋತ್ಸಾಹಿಸಲು 20 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಮೀನು ಕೃಷಿಯನ್ನು ಉತ್ತೇಜಿಸಲು ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ. ಸಾರ್ವಜನಿಕರಿಗೆ ಗುಣಮಟ್ಟದ ಮೀನು ಉತ್ಪನ್ನಗಳನ್ನು ಪೂರೈಸಲು ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನಗಳನ್ನು ಕೇಂದ್ರ ಸರ್ಕಾರದ ಸಹಯೋಗ ದೊಂದಿಗೆ ಒದಗಿಸಲಾಗುತ್ತದೆ ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ. ಗಳ ಅನುದಾನದಲ್ಲಿ ISRO ಅಭಿವೃದ್ಧಿಪಡಿಸಿರುವ GPS ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ.

ಇನ್ನು ಮೀನುಗಾರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದ್ದು, ರಾಜ್ಯ ಸರಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಮೀನುಗಾರರ ವಸತಿ ಯೋಜನೆಯನ್ನು ಇನ್ನಷ್ಟು ವಿಸ್ತರಣೆ ಮಾಡಲಾಗುತ್ತಿದ್ದು, ಈ ಬಾರಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಕ್ರಮವಹಿಸಲಾಗುತ್ತಿದೆ ಎಂದು ಘೋಷಿಸಿದ್ದಾರೆ.

ಇನ್ನು ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್‌ ಆಧಾರಿತ ಮೋಟಾ‌ ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ. ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ ವರ್ಷಗಳ ಅವಧಿಗೆ 2 ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು ಎಂದು ಘೋಷಿಸಿದ್ದಾರೆ.

ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ನೀಡುತ್ತಿರುವ ಡೀಸೆಲ್‌ನ ಮಿತಿಯನ್ನು ಸದ್ಯದ 1.5 ಲಕ್ಷ ಕಿಲೋ ಲೀಟರ್‌ಗಳಿಂದ 2 ಲಕ್ಷ ಹೆಚ್ಚಿಸಲಾಗುವುದು. ಇದರಿಂದ ಕಿಲೋ ದರದಲ್ಲಿ ಲೀಟರ್‌ಗಳವರೆಗೆ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳ ನೆರವಾಗಲಿದೆ. ಮೀನುಗಾರರಿಗೆ ನೀಡುತ್ತಿರುವ ಸೀಮೆ ಎಣ್ಣೆ ಸಹಾಯಧನದ ಪ್ರಕ್ರಿಯೆಯನ್ನು ಸರಳೀಕರಿಸಿ ಮುಖಾಂತರ ಮಾಡಲಾಗುವುದು. ನೇರವಾಗಿ ಪ್ರಸಕ್ತ ಮೀನುಗಾರರ ಸಾಲಿನಿಂದ ಖಾತೆಗೆ ಜಮೆ ಆಗಲಿದೆ.

ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ (Deep sea fishing boats) ಪ್ರಧಾನ ಮಂತ್ರಿ ಮತ್ತ್ವ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ, ಮತ್ಸ ಸಿರಿ ಎಂಬ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ. ಸೀಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ ಎಂದಿದ್ದಾರೆ.

ಇನ್ನು ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು. ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಷನ್ ಚಾನೆಲ್ ಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಟೆಂಡರ್ ಕರೆಯಲಾಗಿದೆ. ಇದರಿಂದ ಮೀನುಗಾರಿಕೆ ದೋಣಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ ಎಂದಿದ್ದಾರೆ. ಆವರ್ತ ನಿಧಿಗೆ ಬಲ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಧಾನ್ಯಗಳಿಗೆ, ರೈತರಿಗೆ ತ್ವರಿತವಾಗಿ ಹಣಪಾವತಿ ಮಾಡಲು ಸ್ಥಾಪಿಸಿರುವ ಆವರ್ತ ನಿಧಿಯನ್ನು ನಮ್ಮ ಸರ್ಕಾರದ ಕಾಲಾವಧಿಯಲ್ಲಿ 2,000 ಕೋಟಿ ಗಳವರೆಗೆ ಹೆಚ್ಚಿಸಲಾಗುವುದೆಂದು 2020-21ನೇ ಸಾಲಿನಲ್ಲಿ ಘೋಷಿಸಲಾಗಿತ್ತು. ಪ್ರಸ್ತುತ ಆವರ್ತ ನಿಧಿ ಮತ್ತು ಕರ್ನಾಟಕ ಆಹಾರ ನಿಗಮಕ್ಕೆ ಧಾನ್ಯಗಳ ಖರೀದಿಗೆ ಬಿಡುಗಡೆ ಮಾಡಿರುವ ಅನುದಾನ ಸೇರಿ ಒಟ್ಟು 1,000 ಕೋಟಿ ರೂ. ಗಳಿದ್ದು, 2022-23ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 1,000 ಕೋಟಿ ಗಳನ್ನು ಒದಗಿಸಲಾಗಿದೆ. ಪ್ರಸಕ್ತ ಆಯವ್ಯಯದಲ್ಲಿ 1,500 ಕೋಟಿ ರೂ. ಗಳನ್ನು ಒದಗಿಸಿ, 3,500 ಕೋಟಿ ಗಳಿಗೆ ಏರಿಸಲಾಗುವುದು ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ : Karnataka budget 2023 : ಬಜೆಟ್ ಮಂಡನೆಗೂ ಮೊದಲೇ ದೇವರ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಇದನ್ನೂ ಓದಿ : Karnataka Budget 2023 : ಶಾಲೆ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

Fishermen Budget 2023 : Seafood Park in Byndoor What did the fishermen get in the budget?

Arun Gundmi | ಅರುಣ್ ಗುಂಡ್ಮಿ
Arun Gundmi Editor In Chief News Next Kannada. Working in more than 20 Years in Kannada Media (Print, Digital and News Channels. Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular