Mullayanagiri forest fire : ಚಿಕ್ಕಮಗಳೂರು : ದೇಶದ ಪ್ರಮುಖ ಪ್ರವಾಸಿ ತಾಣ ಎನಿಸಿಕೊಂಡಿರುವ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಯಲ್ಲಿ ತಪ್ಪಲಿನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಕಾಡ್ಗಿಚ್ಚಿನಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದ್ದು, ಅರಣ್ಯ ಇಲಾಖೆ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಯ ಬೈರೆಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡಿರುವ ಕಾಡ್ಗಿಚ್ಚು ಇದೀಗ ಕವಿಕಲ್ ಗುಂಡಿ ಅರಣ್ಯದ ವರೆಗೂ ವ್ಯಾಪಿಸಿದೆ. ಇಳಿಜಾರು ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಸದಾ ಗಾಳಿ ಬೀಸುತ್ತಲೇ ಇರುವುರಿಂದಾಗಿ ಬೆಂಕಿ ವೇಗವಾಗಿ ಹರಡುತ್ತಿದೆ. ಬೆಂಕಿಯ ತೀವ್ರತೆಯ ಕಾರಣದಿಂದಲೇ ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಸಾಧ್ಯವಾಗುತ್ತಿಲ್ಲ. ಸ್ಥಳೀಯರೇ ಬೆಂಕಿ ಹಚ್ಚಿರಬಹುದು ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ : Mullayanagiri : ಮಂಜಿನ ಓಟ ಹಚ್ಚ ಹಸಿರ ವನರಾಶಿ : ಇದು ಭೂಲೋಕದ ಸ್ವರ್ಗ ಮುಳ್ಳಯ್ಯನಗಿರಿ
ಬೇಸಿಗೆ ಆರಂಭವಾದ ನಂತರದಲ್ಲಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಸಾಮಾನ್ಯವಾಗಿ ಬೆಂಕಿ ಕಾಣಿಸಿಕೊಳ್ಳುತ್ತದೆ. ಕವಿಕಲ್ ಗುಂಡಿಯ ಬಳಿಯಲ್ಲಿ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್ ಇದ್ದು, ಅಧಿಕಾರಿಗಳು ತೀವ್ರ ನಿಗಾ ವಹಿಸುತ್ತಿದ್ದಾರೆ. ಆದರೆ ಇದೀಗ ಯಾವ ಕಾರಣದಿಂದ ಮುಳ್ಳಯ್ಯನಗಿರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಅನ್ನೋದು ಇನ್ನೂ ಖಚಿತವಾಗಿಲ್ಲ. ಈ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇಳಿಜಾರು ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಯ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯ ಕಷ್ಟಸಾಧ್ಯ. ಇದೇ ಕಾರಣಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೊಪ್ಪುಗಳನ್ನು ಬಳಕೆ ಮಾಡುತ್ತಿದ್ದಾರೆ. ಇಳಿಜಾರು ಪ್ರದೇಶವಾಗಿರುವುದರಿಂದಾಗಿ ಬೆಂಕಿ ಇರುವ ಪ್ರದೇಶದಕ್ಕೆ ತೆರಳಲು ಕಷ್ಟಸಾಧ್ಯವಾಗಿದೆ.
ಇದನ್ನೂ ಓದಿ : ಕಾಫಿ ನಾಡಿನ ಮುಳ್ಳಯ್ಯನಗಿರಿ : ಟ್ರಕಿಂಗ್ ಪ್ರಿಯರಿಗೆ ಸ್ವರ್ಗ !
ಬಿಸಿಲ ಝಳಕ್ಕೆ ಹುಲ್ಲುಗಾವಲು ಸಂಪೂರ್ಣವಾಗಿ ಒಳಗಿ ಹೋಗಿದ್ದು, ಬೆಂಕಿ ವೇಗವಾಗಿ ಹರಡುತ್ತಿದೆ. ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಶೋಲಾ ಕಾಡುಗಳೇ ಹೆಚ್ಚಾಗಿದ್ದು, ಕಾಡ್ಗಿಚ್ಚಿನಿಂದಾಗಿ ಅರಣ್ಯ ಮಾತ್ರವಲ್ಲದೇ ಇಲ್ಲಿರುವ ಪ್ರಾಣಿಗಳು, ಸರಿಶ್ರಪಗಳು ಕೂಡ ಸುಟ್ಟು ಹೋಗಿರುವ ಸಾಧ್ಯತೆಯಿದೆ. ಬೆಂಕಿ ಇನ್ನೂ ವ್ಯಾಪಿಸದಂತೆ ತಡೆಯುವ ನಿಟ್ಟಿನಲ್ಲಿ ಸದ್ಯ ಕಾರ್ಯಾಚರಣೆ ನಡೆಯುತ್ತಿದೆ.

ಮುಳ್ಳಯ್ಯನಗಿರಿ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ. ಇಲ್ಲಿನ ನಿಸರ್ಗದ ಸೊಬಗನ್ನು ಕಣ್ತುಂಬಿಕೊಳ್ಳಲು ನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇಲ್ಲಿನ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿಯಲ್ಲಿ ಇರುವ ದೇವಾಲಯಗಳಿಗೂ ಭೇಟಿ ನೀಡುತ್ತಿದ್ದಾರೆ. ಹೀಗೆ ಬರುವ ಪ್ರವಾಸಿಗರೇ ಬೆಂಕಿಯ ಕಿಡಿ ಹೊತ್ತಿಸಿದ್ದಾರಾ ಅನ್ನೋ ಕುರಿತು ಅನುಮಾನವಿದೆ.
ಇದನ್ನೂ ಓದಿ :ಸೂರ್ಯ ಮುಳುಗದ ವಿಶ್ವದ 8 ದೇಶಗಳು ! ಇಲ್ಲಿ ದಿನದ 24 ಗಂಟೆಯೂ ಸೂರ್ಯನ ಬೆಳಕು
forest fire in world famous Mullayanagiri Peak in Chikkamagaluru