Forest Officer Pavan missing : ಅರಣ್ಯ ವೀಕ್ಷಕ ಪವನ್ ನಾಪತ್ತೆ ಪ್ರಕರಣ : ಶೋಧ ಕಾರ್ಯ ಮುಂದುವರಿಕೆ

ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ಪವನ್ ನಾಪತ್ತೆ (Forest Officer Pavan missing) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎನ್‌ಡಿಆರ್‌ಎಫ್‌ ತಂಡದಿಂದ ಶೋಧ ಕಾರ್ಯ ಮುಂದುವರಿದಿದೆ. ಇನ್ನೊಂದೆಡೆಯಲ್ಲಿ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಅರಣ್ಯಾಧಿಕಾರಿಗಳಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ವಿಕ್ಷಕ ಪವನ್‌ ( 23 ವರ್ಷ) ಕರ್ತವ್ಯದಲ್ಲಿದ್ದ ವೇಳೆಯಲ್ಲಿ ನಾಪತ್ತೆಯಾಗಿದ್ದರು. ಬಾಳೆಲೆ ಗ್ರಾಮದ ನಿವಾಸಿಯಾಗಿರುವ ಪವನ್‌ ಸಾವು ಇದೀಗ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಪವನ್‌ ಜೊತೆಯಲ್ಲಿದ್ದ ಸಿಬ್ಬಂದಿಯಿಂದ ಕೊಲೆ ಶಂಕೆ ವ್ಯಕ್ತವಾಗುತ್ತಿದೆ. ಜೊತೆಯಲ್ಲಿದ್ದ ಇತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪವನ್‌ ದುರ್ಗಮ ಜಲಪಾತಕ್ಕೆ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಜೊತೆಗಾರರು ಗೊಂದಲಕಾರಿ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಮೂವರು ಸಹೋದ್ಯೋಗಿಗಳನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇನ್ನು ಪವನ್‌ ನಾಪತ್ತೆಯಾಗಿರುವ ಸ್ಥಳದಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗಳ ಜೊತೆಗೆ ಎನ್‌ಡಿಆರ್‌ಎಫ್‌ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ದುರ್ಗಮ ಪ್ರದೇಶವಾಗಿರುವುದರಿಂದಾಗಿ ಕಾರ್ಯಾಚರಣೆಗೆ ತೊಡಕಾಗುತ್ತಿದೆ.

ನಡೆಸುತ್ತಿದ್ದುದು ಗೋಬಿ ಅಂಗಡಿ, ಮಾರಾಟವಾಗಿದ್ದು ಡ್ರಗ್ಸ್​ : ಕೊನೆಗೂ ಖಾಕಿ ಬಲೆಗೆ ಬಿದ್ದ ಐನಾತಿ

ಕೊಡಗು : ಕರ್ನಾಟಕ ಪೊಲೀಸರು ‌ಮಾದಕ‌ದ್ರವ್ಯದ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲಲ್ಲಿ‌ ಡ್ರಗ್ಸ್ ಸಾಗಾಟ ಸೇರಿದಂತೆ ಸೇವನೆ ಮಾಡುತ್ತಿರುವವರನ್ನು ಪೊಲೀಸರು ಹೆಡೆಮುರಿ ಕಟ್ಟುತ್ತಿರುತ್ತಾರೆ. ಒರಿಸ್ಸಾದಿಂದ ಗಾಂಜಾ ತಂದು ಕೊಡಗಿನಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಿರಾಜಪೇಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ವಿರಾಜಪೇಟೆ ಮೂಲದ ಸೂರ್ಯಕಾಂತ ಮೊಹಂತಿ ಎಂದು ಹೆಸರಿಸಲಾಗಿದೆ.

ಈತ ಒರಿಸ್ಸಾದಿಂದಲೇ ಗಾಂಜಾ ತಂದು ಮಾರಾಟ ಮಾಡುತ್ತಿದ್ದ. ಕೊಡಗಿನಿಂದ ಕೇರಳಕ್ಕೆ ಗಾಂಜಾ ಸಾಗಿಸುತ್ತಿದ್ದಾಗ ಪೆರುಂಬಾಡಿಯಲ್ಲಿ ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಹುಂಡೈ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ. ಸದ್ಯ ಆರೋಪಿಯಿಂದ 6.50 ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಸೂರ್ಯಕಾಂತ ಮೊಹಂತಿ ವಿರಾಜಪೇಟೆ ಮತ್ತು ಹಳ್ಳಿಗಟ್ಟುವಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಕ್ಯಾಂಟೀನ್ ಗುತ್ತಿಗೆಯನ್ನು ಪಡೆದಿದ್ದ. ಈ ಕ್ಯಾಂಟೀನ್ ನಡೆಸುತ್ತಾ ಗಾಂಜಾ ಗ್ರಾಹಕರಾಗಿ ವಿದ್ಯಾರ್ಥಿಗಳನ್ನೆ ಟಾರ್ಗೆಟ್ ಮಾಡುತ್ತಿದ್ದ ಎಂಬ ಮಾಹಿತಿಯು ಪೊಲೀಸರಿಗೆ ಲಭಿಸಿದೆ. ಕಾಲೇಜುಗಳಲ್ಲಿ ಕ್ಯಾಂಟೀನ್ ನಡೆಸುವುದರ ಜೊತೆಗೆ ವಿರಾಜಪೇಟೆಯಲ್ಲಿ ಗೋಬಿ‌ ಮಂಚೂರಿ ವ್ಯಾಪಾರವನ್ನು ನಡೆಸುತ್ತಿದ್ದ. ಆದ್ರೆ ಈ ಗೋಬಿ ಮಂಚೂರಿ ವ್ಯಾಪಕ ಹೆಸರಿಗಷ್ಟೇ ನಡೆಸುತ್ತಿದ್ದ. ವಿರಾಜಪೇಟೆ ಡಿ.ವೈ.ಎಸ್ಪಿ ಮಾರ್ಗದರ್ಶನದಲ್ಲಿ ಆರೋಪಿ ಸೂರ್ಯಕಾಂತ ನ ಹೆಡೆಮುರಿ ಕಟ್ಟಿರುವ ಪೊಲೀಸರು ಈತನ ಮತ್ತಷ್ಟು ಅಕ್ರಮವನ್ನು ಬಯಲು ಮಾಡುತ್ತಿದ್ದಾರೆ.

ಈ ಡ್ರಗ್ಸ್ ಜಾಲದ ಹಿಂದೆ‌ ಮತ್ತಷ್ಟು ಮಂದಿ ಇರುವ ಶಂಕೆ ಇದೆ. ಹೀಗಾಗಿ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ. ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳಿಗೆ ಗಾಂಜಾ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ನಡುವೆಯೇ ಗಾಂಜಾ ಸಪ್ಲೈ ಮಾಡುವುದಕ್ಕೆ ವಿದ್ಯಾರ್ಥಿಗಳನ್ನು ರೆಡಿ ಮಾಡಿದ್ದ. ಸದ್ಯ ಈತ ಗಾಂಜಾ ಮಾತ್ರವಲ್ಲದೇ ಇನ್ನಿತರ ಮಾದಕ ದ್ರವ್ಯ ಸಪ್ಲೈ ಮತ್ತು‌ ಮಾರಾಟ ಮಾಡುತ್ತಿದ್ದ ಎಂಬ ಸಂಶಯವೂ ಪೊಲೀಸರಿಗಿದೆ. ಈತ ಕೇವಲ ಕೊಡಗು ಮಾತ್ರವಲ್ಲದೆ ಪಕ್ಕದ ಕೇರಳ ರಾಜ್ಯಕ್ಕೂ ನಿರಂತರವಾಗಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ.

ಇದನ್ನೂ ಓದಿ : SM Krishna : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : ಮಂಗಳೂರಿನ ಹಾಸ್ಟೆಲ್​ನಿಂದ ವಿದ್ಯಾರ್ಥಿನಿಯರು ಎಸ್ಕೇಪ್​ ಪ್ರಕರಣ ಸುಖಾಂತ್ಯ

Forest Officer Pavan missing On Duty in Kodagu Makutta

Comments are closed.