siddaramaiah younger brother ramegowda dies : ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ವಿಧಿವಶ

ಮೈಸೂರು : siddaramaiah younger brother ramegowda dies : ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ವಿಧಿವಶರಾಗಿದ್ದಾರೆ. ಮೈಸೂರಿನ ಸಿದ್ದರಾಮಯ್ಯನಹುಂಡಿ ನಿವಾಸಿಯಾಗಿದ್ದ 67 ವರ್ಷದ ರಾಮೇಗೌಡ ಕಿಡ್ನಿ ವೈಫಲ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ವೇಳೆಗೆ ರಾಮೇಗೌಡ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ.


ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಹೋದರನಾಗಿದ್ದರೂ ಸಹ ರಾಮೇಗೌಡ ಹಮ್ಮು ಬಿಮ್ಮುಗಳನ್ನು ಹೊಂದಿದ್ದ ವ್ಯಕ್ತಿಯಾಗಿರಲಿಲ್ಲ. ರಾಜಕೀಯದಲ್ಲಿ ಸಹೋದರ ಉನ್ನತ ಸ್ಥಾನಕ್ಕೆ ಏರಿದ್ದರೂ ಸಹ ಇವರ ಸರಳ ಜೀವನದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಮೊನ್ನೆ ಮೊನ್ನೆಯವರೆಗೂ ರಾಮೇಗೌಡ ಕೃಷಿಕನಾಗಿ ದನ -ಕರುಗಳನ್ನು ಮೇಯಿಸಿಕೊಂಡೇ ತಮ್ಮ ಜೀವನವನ್ನು ಸಾಗಿಸುತ್ತಿದ್ದರು. ರಾಮೇಗೌಡರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದ ಹಿನ್ನೆಲೆಯಲ್ಲಿ ಗುರುವಾರದಂದು ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ರಾಮೇಗೌಡರ ಆರೋಗ್ಯ ವಿಚಾರಿಸಿದ್ದರು.


ಕೆಲವು ದಿನಗಳ ಹಿಂದೆ ದಾವಣಗೆರೆಯಲ್ಲಿ ಸಿದ್ದರಾಮಯ್ಯರ ಜನ್ಮದಿನವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಆಗಮಿಸಲೂ ಸಹ ರಾಮೇಗೌಡರಿಗೆ ಅವರ ಅನಾರೋಗ್ಯ ಬಿಟ್ಟಿರಲಿಲ್ಲ. ಕಾಲು ನೋವಿನಿಂದ ಬಳಲುತ್ತಿದ್ದ ರಾಮೇಗೌಡರು ದಾವಣಗೆರೆವರೆಗೆ ಪ್ರಯಾಣಿಸಲು ಸಾಧ್ಯವಾಗದೇ ಸಹೋದರನ ಜನ್ಮದಿನದ ಆಚರಣೆಯಲ್ಲಿ ಭಾಗಿಯಾಗಿರಲಿಲ್ಲ.


ಇನ್ನು ರಾಮೇಗೌಡರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.ಮಾಡಿದ್ದು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟಾಯಿಸಿದ್ದಾರೆ .

ಇದನ್ನು ಓದಿ : order food from their train seat : ಇನ್ಮುಂದೆ ರೈಲ್ವೆ ಸೀಟಿನಲ್ಲಿಯೇ ಕುಳಿತು ವಾಟ್ಸಾಪ್​​ನಲ್ಲಿ ಮಾಡಬಹುದು ಫುಡ್​ ಆರ್ಡರ್​ : ಇಲ್ಲಿದೆ ಹೆಚ್ಚಿನ ಮಾಹಿತಿ

ಇದನ್ನೂ ಓದಿ : R ASHOK REACTION : ಗಣೇಶೋತ್ಸವಕ್ಕೆ ಎದುರಾದ ವಿಘ್ನ ಶೀಘ್ರದಲ್ಲೇ ನಿವಾರಣೆಯಾಗುತ್ತೆ : ಆರ್​.ಅಶೋಕ್​ ವಿಶ್ವಾಸ

former cm siddaramaiah younger brother ramegowda dies at 67 in mysore

Comments are closed.