Anjanamurthy : ಮಾಜಿ ಸಚಿವ ಅಂಜನಾಮೂರ್ತಿ ಹೃದಯಾಘಾತ ದಿಂದ ನಿಧನ

ಬೆಂಗಳೂರು : ಮಾಜಿ ಸಚಿವ, ಮಾಜಿ ಉಪಸಭಾಪತಿ ಅಂಜನಾಮೂರ್ತಿ ( Anjanamurthy ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರದ ನಿವಾಸಿಯಾಗಿದ್ದಾರೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಕಳೆದ ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ. ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ವಸತಿ ಸಚಿವರಾಗಿ ಕೆಲಸ ಮಾಡಿದ್ದರು. ಉಪಸಭಾಪತಿ ಯಾಗಿಯೂ ಸೇವೆ ಸಲ್ಲಿಸಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಅಂಜನಾಮೂರ್ತಿ ( (Anjanamurthy) ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

ಕೊನೆಗೂ ಕ್ಷೇತ್ರ ಆಯ್ದುಕೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಜ್ಯದಲ್ಲಿ ವಿಧಾನಸಭೆ ಸಮೀಪಿಸುತ್ತಿದ್ದು, ಪಕ್ಷಗಳ ಟಿಕೆಟ್‌ ಹಂಚಿಕೆಗೆ ಕ್ಷೇತ್ರಗಳನ್ನು ಆಯ್ದುಕೊಳ್ಳುವಲ್ಲಿ ಸಚಿವರು ಬ್ಯುಸಿಯಾಗಿದ್ದಾರೆ. ಆದರೆ ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತ್ರ ಇಂದಿಗೂ ತನ್ನ ಕ್ಷೇತ್ರದ ಗುಟ್ಟು ಬಿಟ್ಟುಕೊಟ್ಟಿಲ್ಲ. ಈಗಲೂ ಕೂಡ ಕ್ಷೇತ್ರ ಸಿದ್ದರಾಮಯ್ಯನವರ ಕ್ಷೇತ್ರ ಆಯ್ಕೆಯಲ್ಲಿ ಗೊಂದಲಗಳಿದ್ದು, ಮೂರು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಬಾದಾಮಿ, ಕೋಲಾರ, ವರುಣಾ ನನ್ನ ಆಯ್ಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ : Assembly Election 2023 : ಎಎಪಿ ಟಿಕೆಟ್‌ ಆಕಾಂಕ್ಷಿಗಳ ಮೊದಲ ಪಟ್ಟಿ ಬಿಡುಗಡೆ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಬಾದಾಮಿ, ಕೋಲಾರ, ವರುಣಾ ನನ್ನ ಆಯ್ಕೆ . ವರಿಷ್ಟರ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ ಕೊನೆಗೂ ತನ್ನ ಕ್ಷೇತ್ರದ ಗುಟ್ಟು ಬಿಟ್ಟು ಕೊಟ್ಟಿಲ್ಲ. ಈ ಬಗ್ಗೆ ವರಿಷ್ಟರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ, ನಾಳೆ ಕಾಂಗ್ರೆಸ್ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ವರಿಷ್ಟರ ನಿರ್ಧಾರವೇ ಅಂತಿಮ, ಯಾವುದೇ ಕ್ಷೇತ್ರದಲ್ಲಿ ನಿಂತರೂ ನಾನು ಗೆಲ್ಲಲ್ಲ, ನನ್ನನ್ನು ಕ್ಷೇತ್ರಕ್ಕೆ ಆಹ್ವಾನಿಸುವವರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ : Karnataka Assembly Elections: ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಯೋಜನೆಯನ್ನು ಘೋಷಿಸಿದ ರಾಹುಲ್ ಗಾಂಧಿ

ಈ ಹಿಂದೆ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬೇಡ ಎಂದು ರಾಹುಲ್‌ ಗಾಂಧಿ ಸಿದ್ದರಾಮಯ್ಯನವರಿಗೆ ಹೇಳಿದ್ದು, ಮತ್ತೆ ಸಿದ್ದು ಗೊಂದಲದಲ್ಲಿ ಸಿಲುಕಿದ್ದಾರೆ. ಅಳೆದು ತೂಗಿ ಲೆಕ್ಕ ಹಾಕಿ ಕೋಲಾರ ಕ್ಷೇತ್ರದಲ್ಲಿ ಫೈನಲ್‌ ಆಗಿದ್ದ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಬ್ರೇಕ್‌ ಹಾಕಿದೆ. ಆದರೆ ಸಿದ್ದರಾಮಯ್ಯನವರ ಅಭಿಮಾನಿಗಳ ದಂಡು ಸಿದ್ದು ಕೋಲಾರದಿಂದಲೇ ಸ್ಪರ್ಧಿಸಲಿ ಎಂದು ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ ಸಿದ್ದರಾಮಯ್ಯನವರ ಕ್ಷೇತ್ರ ಆಯ್ಕೆ ಗೊಂದಲದ ಗೂಡಾಗಿದೆ.

Comments are closed.