ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಪೈಪೋಟಿ ನಡೆಯುತ್ತಿದೆ. ಈ ಬೆನ್ನಲ್ಲೇ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ (Congress – JDS coalition government) ಪತನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎನ್ನುವ ಮೂಲಕ ಮಾಜಿ ಸಚಿವ ಡಾ.ಕೆ.ಸುಧಾಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
2018ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆಗೂಡಿ ಸಮ್ಮಿಶ್ರ ಸರಕಾರ ರಚಿಸಿತ್ತು. ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಿಎಂ ಆಗಿ ನೇಮಿಸಿತ್ತು. ಆದರೆ ಆಪರೇಷನ್ ಕಮಲದ ಮೂಲಕ ಜೆಡಿಎಸ್ ಕಾಂಗ್ರೆಸ್ ಸರಕಾರ ಪತನವಾಗಿತ್ತು. ಇದೀಗ ಈ ಕುರಿತು ಸುಧಾಕರ್ ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಳೆದ 2018ರಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ರಚನೆಯಾಗಿದ್ದು, ಇದ್ದರಿಂದ ಹೊರ ಬರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಮಾಜಿ ಆರೋಗ್ಯ ಸಚಿವ ಡಾ. ಸುಧಾಕರ್ ಸರಣಿ ಟ್ವೀಟ್ ಮಾಡುವ ಮೂಲಕ ಆರೋಪಿಸಿದ್ದಾರೆ.
ಡಾ. ಸುಧಾಕರ್ ಈ ಕುರಿತಂತೆ ಸರಣಿ ಟ್ವೀಟ್‌ನಲ್ಲಿ, 2018ರಲ್ಲಿ ಅಂದಿನ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದಿದ್ದಾರೆ.
During the JDS-Cong coalition govt in 2018, whenever MLAs went to the then Coordination Committe Chairman Shri Siddaramaiah with their concerns, he used to express his helplessness and say that he has no say in the govt and his constituency/district works itself are stalled.
— Dr Sudhakar K (@mla_sudhakar) May 17, 2023
1/3
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿನವೂ ಕುಮಾರಸ್ವಾಮಿ ಅವರ ನೃತೃತ್ವದ ಈ ಸಮ್ಮಿಶ್ರ ಸರಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಇದನ್ನೂ ಓದಿ : ವಿಧಾನಸೌಧದ ಅಂಗಳದಲ್ಲೇ ಇದ್ಯಾ ಸರಕಾರದ ಅವಧಿ ನಿರ್ಧರಿಸೋ ಶಕ್ತಿ: ಇದು ರಾಜಕಾರಣದ EXCLUSIVE STORY
“ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?” ಎಂದು ಮಾಜಿ ಸಚಿವ ಸುಧಾಕರ್ ಪ್ರಶ್ನಿಸಿದ್ದಾರೆ.
Former minister Sudhakar said that Siddaramaiah was responsible for the collapse of the Congress-JDS coalition government