HD Deve Gowda :‘ನಾನು ಆರೋಗ್ಯವಾಗಿದ್ದೇನೆ, ಶೀಘ್ರದಲ್ಲೇ ಪಕ್ಷದ ಕಚೇರಿಗೆ ಭೇಟಿ ನೀಡುವೆ’ : ಮಾಜಿ ಪ್ರಧಾನಿ ಹೆಚ್​ಡಿಡಿ

ಬೆಂಗಳೂರು : HD Deve Gowda health information: ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಮಂಡಿ ನೋವಿನ ಸಮಸ್ಯೆಯಿಂದಾಗಿ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಹೆಚ್​ಡಿ ದೇವೇಗೌಡರನ್ನು ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಿದ್ದರು.ಇದಾದ ಬಳಿಕ ಪಕ್ಷದ ಕಾರ್ಯಕರ್ತರು ಹಾಗೂ ಹೆಚ್​ಡಿಡಿ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದರು.

ಆದರೆ ಇದೀಗ ಸ್ವತಃ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ತಮ್ಮ ಆರೋಗ್ಯದ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾನು ಆರೋಗ್ಯವಾಗಿದ್ದೇನೆ, ಶೀಘ್ರದಲ್ಲಿಯೇ ಪಕ್ಷದ ಕಚೇಟಿಗೆ ಭೇಟಿ ನೀಡಲಿದ್ದೇನೆ. ಆದರೆ ಅಲ್ಲಿಯವರೆಗೆ ಮನೆಯಿಂದಲೇ ಎಲ್ಲಾ ಹೊಣೆ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯವಿದ್ದರಿಂದ ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಆದ ಕಾರಣ ಕೆಲ ಕಾಲ ಮನೆಯಲ್ಲಿಯೇ ವಿಶ್ರಾಂತಿ ಪಡೆಯಬೇಕಾಯಿತು. ಇನ್ನು ಕೆಲವು ದಿನಗಳ ನಾನು ವೈದ್ಯರ ಸಲಹೆಯಂತೆ ವಿಶ್ರಾಂತಿಯಲ್ಲಿ ಇರಲಿದ್ದೇನೆ . ಮನೆಯಲ್ಲಿದ್ದೇ ಎಲ್ಲಾ ನನ್ನ ರಾಜಕೀಯ , ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸಲಿದ್ದೇನೆ . ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬಾರದಂತೆ ಹೆಚ್​ಡಿಡಿ ಮನವಿ ಮಾಡಿದ್ದಾರೆ.

ಕೆಲವೇ ದಿನಗಳಲ್ಲಿ ನಾನೇ ಖುದ್ದು ಪಕ್ಷದ ಕಚೇರಿಗೆ ಭೇಟಿ ನೀಡಿ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಲಿದ್ದೇನೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅನ್ಯತಾ ಭಾವಿಸಬೇಡಿ. ನನ್ನ ನಿವಾಸಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ , ಕಂದಾಯ ಸಚಿವ ಆರ್​.ಅಶೋಕ್​ ಸೇರಿದಂತೆ ಸಂಪುಟದ ಎಲ್ಲಾ ಸಚಿವರಿಗೆ ನಾನು ಆಭಾರಿ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ : Flipkart Big Billion Days Sale : ಫ್ಲಿಪ್‌ಕಾರ್ಟ್‌ ಸೇಲ್‌, ಆಫರ್‌ ಬೆಲೆಯಲ್ಲಿ ನಥಿಂಗ್ ಫೋನ್ ಹಾಗೂ ಗೂಗಲ್ ಪಿಕ್ಸೆಲ್

ಇದನ್ನೂ ಓದಿ : Doordarshan: ಬಹು ನಿರೀಕ್ಷಿತ “ದೂರದರ್ಶನ” ಸಿನಿಮಾದಲ್ಲಿ.. ಪೃಥ್ವಿ ಅಂಬಾರ್ ಜೊತೆ ಉಗ್ರಂ ಮಂಜು ಹೊಸ ಅವತಾರ

Former Prime Minister HD Deve Gowda gave information about health

:

Comments are closed.