ಸೋಮವಾರ, ಏಪ್ರಿಲ್ 28, 2025
HomekarnatakaRed orange Alert : ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ: ರೆಡ್,ಆರೆಂಜ್ ಅಲರ್ಟ್ ಘೋಷಿಸಿದ...

Red orange Alert : ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ: ರೆಡ್,ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

- Advertisement -

ಬೆಂಗಳೂರು : (Red orange Alert) ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಕಾವೇರಿ, ತುಂಗಭದ್ರಾ, ಹೇಮಾವತಿ, ನೇತ್ರಾವತಿ ಪಯಸ್ವಿನಿ ಸೇರಿದಂತೆ ರಾಜ್ಯದ ಬಹುತೇಕ ನದಿಗಳು ತುಂಬಿ ತುಳುಕುತ್ತಿವೆ. ಈ ಮಧ್ಯೆ ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ 10 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಮನೆ, ತೋಟ, ಗದ್ದೆ, ಜಾನುವಾರು ಕಳೆದು ಕೊಂಡು ಅತಂತ್ರರಾಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯಾದ್ಯಂತ ಜುಲೈ 14ರವರೆಗೆ ಮುಂದುವರೆಯಲಿದೆ ಎಂದು ಎಚ್ಚರಿಸಿದೆ.

ವಾಯುಭಾರ ಕುಸಿತ ಸೇರಿದಂತೆ ವಿವಿಧ ಕಾರಣಗಳಿಗಾಗಿ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ‌ ಮಳೆ‌ ಮುಂದುವರೆಯಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಜುಲೈ 13ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ಇರಲಿದ್ದು 65 ಕಿ.ಮೀ ವರೆಗೂ ತಲುಪುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದ್ದು, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಜುಲೈ 14ರವರೆಗೆ ಹಾಸನ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿಕೂಡ ಭಾರಿ ಮಳೆ ಸುರಿಯಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕಲ್ಬುರ್ಗಿ, ಬೀದರ್, ಚಿಕ್ಕಮಗಳೂರು, ಉಡುಪಿ, ಕಾರವಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ.

ರಾಜ್ಯದಾದ್ಯಂತ ಮಳೆಯಿಂದಾಗಿ ಕೃಷಿ ಚಟುವಟಿಕೆ ಸ್ಥಗಿತಗೊಂಡಿದ್ದು, ಬಿತ್ತನೆ ಮಾಡಿದ ಭತ್ತದ ಸಸಿಗಳು ಕೊಳೆಯುವ ಸ್ಥಿತಿಯಲ್ಲಿದೆ. ಈ ಮಧ್ಯೆ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಹಾನಿ ಉಂಟಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರುಗಳು ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಹಾಗೂ ಜನರ ಸಂಕಷ್ಟ ಕೇಳುತ್ತಿಲ್ಲ ಎಂಬ ಆಕ್ರೋಶ ಜನರಿಂದ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸಿಎಂ ಬೊಮ್ಮಾಯಿ ನಾಳೆಯಿಂದ ಉಡುಪಿ, ಮಂಗಳೂರು, ಕಾರವಾರ ಸೇರಿದಂತೆ ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಜನರ ಸಂಕಟ ಆಲಿಸಲಿದ್ದಾರೆ.

ಇದನ್ನೂ ಓದಿ : Vijay Mallya : ವಿಜಯ್‌ ಮಲ್ಯಗೆ ಮುಗಿಯದ ಸಂಕಷ್ಟ: ನಾಲ್ಕು ತಿಂಗಳ ಶಿಕ್ಷೆ ವಿಧಿಸಿದ ಸುಪ್ರೀಂ ಕೋರ್ಟ್

ಇದನ್ನೂ ಓದಿ : Smartphones to Launch : ಭಾರತದಲ್ಲಿ ಈ ವಾರ ಬಿಡುಗಡೆ ಮತ್ತು ಮಾರಾಟಕ್ಕೆ ಸಿದ್ಧವಾಗಿರುವ ಸ್ಮಾರ್ಟ್‌ಫೋನ್‌ಗಳು!!

Four more days of rain in the Karnataka : Red orange alert announced by Meteorological Department

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular