Free bus pass for students: ಏ.1 ರಿಂದಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್:‌ ಸಿಎಂ ಬೊಮ್ಮಾಯಿ

ಬೆಂಗಳೂರು: (Free bus pass for students) ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ್ದು, ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ ಎಂದರು.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಬಿಜೆಪಿ ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದು, ಇದೀಗ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್‌ ನೀಡುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಈ ಬಾರಿಯ ಬಜೆಟ್ ನಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದು, ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜೊತೆಗಿರುತ್ತದೆ. ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದರು.

ಇದನ್ನೂ ಓದಿ : ಬ್ರಹ್ಮಾವರ : 94 CC ಅರ್ಜಿ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ

ಇದನ್ನೂ ಓದಿ : Airforce plane in Shimoga Airport: ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಯ್ತು ವಾಯುಸೇನೆಯ ವಿಮಾನ

ಇದನ್ನೂ ಓದಿ : Kota Srinivas Poojary : ಶ್ರೀ ನಾರಾಯಣಗುರು ವಸತಿ ಶಾಲೆ : ಕೊನೆಗೂ ಆದೇಶ ಹೊರಡಿಸಿದ ಸಿಎಂ ಬೊಮ್ಮಾಯಿ

Free bus pass for students: Free bus pass for girl students from A.1 onwards: CM Bommai

Comments are closed.