ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸರಕಾರ ಸಿದ್ಧತೆ ನಡೆಸಿದೆ. ಆದರೆ, ಈ ಗ್ಯಾರಂಟಿ ಯೋಜನೆಗಳಿಗೆ ಹಲವಾರು ಷರತ್ತುಗಳನ್ನು ವಿಧಿಸಲು ಸರಕಾರ ಚಿಂತನೆ ನಡೆಸಿದ್ದು, ಸದ್ಯ (Free bus pass for women) ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತುಗಳನ್ನು ವಿಧಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.
ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತುಗಳೇನು ?
ಕಾಂಗ್ರೆಸ್ ಸರಕಾರ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ರಾಜ್ಯದ ಹಲವೆಡೆ ಬಸ್‌ನಲಿ ಮಹಿಳಾ ಪ್ರಯಾಣಿಕರು ಟಿಕೆಟ್ ಪಡೆಯುದಿಲ್ಲ ಎಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪಾಸ್ ಘೋಷಣೆ ಮಾಡಿದ ಕಾಂಗ್ರೆಸ್ ಸರಕಾರ ಈಗ ಷರತ್ತುಗಳನ್ನು ವಿಧಿಸಿದೆ. ಅವುಗಳನ್ನು ಈ ಕೆಳಗೆ ತಿಳಿಸಲಾಗಿದೆ.
- ಈ ಯೋಜನೆಗೆ ಮಹಿಳೆಯರು ಕರ್ನಾಟಕದವರೇ ಆಗಿರಬೇಕು.
- ಈ ಪಾಸ್ ನೀಡಲು ಬಿಪಿಎಲ್ ಕಾರ್ಡ್ ಕಡ್ಡಾಯ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.
- ಕೆಂಪು ಬಸ್‌ಗಳಲ್ಲಿ ಮಾತ್ರ ಉಚಿತ ಬಸ್ ಪಾಸ್ ಅನ್ವಯವಾಗಲಿದೆ.
- ತಮ್ಮ ಊರಿನಿಂದ ೫೦ ಕಿಮೀ. ವರೆಗೆ ಮಾತ್ರ ಪ್ರಯಾಣ ಮಾಡಬಹುದು.
- ಲಕ್ಸುರಿ ಹಾಗೂ ಎಸಿ ಬಸ್ಸುಗಳಲ್ಲಿ ಈ ಯೋಜನೆ ಲಾಭ ಲಭ್ಯವಿಲ್ಲ.
ಇದನ್ನೂ ಓದಿ : Youth Fund Scheme : ಯುವನಿಧಿ ಯೋಜನೆ ಮಾನದಂಡ ಪ್ರಕಟ : ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?
Free bus pass for women: 5 conditions for free bus travel for women