Free travel for women : ನಾಳೆಯಿಂದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಹಿಳೆಯರಿಗೆ (Free travel for women) ಗುಡ್‌ನ್ಯೂಸ್‌ ಕೊಟ್ಟಿದೆ. ನಾಳೆಯಿಂದ ರಾಜ್ಯದಾದ್ಯಂತ ಮಹಿಳೆಯರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ನಿಗಮ, ಈಶಾನ್ಯ ಕರ್ನಾಟಕ ಸಾರಿಗೆ ನಿಗಮಗಳಿಗೆ ಸೇರಿದ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ವಿಧಾನಸಭಾ ಚುನಾವಣೆಯ ಹೊತ್ತಲ್ಲೇ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ್ರೆ ಐದು ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಘೋಷಣೆಯನ್ನು ಮಾಡಿತ್ತು. ಇದೀಗ ಮೊದಲ ಗ್ಯಾರಂಟಿಯನ್ನು ಸರಕಾರ ಈಡೇರಿಕೆ ಮಾಡಿದೆ. ಈಗಾಗಲೇ ಐದು ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ತಾತ್ವಕ ಒಪ್ಪಿಗೆಯನ್ನು ನೀಡಲಾಗಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉಚಿತ ಬಸ್‌ ಪ್ರಯಾಣದ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಸ್ಸುಗಳಲ್ಲಿ ಮಹಿಳೆಯರು ಟಿಕೆಟ್‌ ಪಡೆದು ಸಂಚಾರ ನಡೆಸಲು ವಿರೋಧ ವ್ಯಕ್ತಪಡಿಸಿದ್ದು, ಕೆಲವು ಕಡೆಗಳಲ್ಲಿ ಸಾರಿಗೆ ಸಿಬ್ಬಂಧಿಗಳ ಮೇಲೆ ಹಲ್ಲೆ ನಡೆದಿರುವ ಘಟನೆಯೂ ನಡೆದಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಒಕ್ಕೂಟ ಉಚಿತ ಬಸ್‌ ಪ್ರಮಾಣವನ್ನು ಜಾರಿ ಮಾಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ನಡೆದ ಸಾಲು ಸಾಲು ಸಭೆಯ ಬೆನ್ನಲ್ಲೇ ಸಿಹಿ ಸುದ್ದಿ ಹೊರಬಿದ್ದಿದೆ.

ಇನ್ನೊಂದೆಡೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ, ವಾಯವ್ಯ ಕರ್ನಾಟಕ ಸಾರಿಗೆ ನಿಗಮ, ಈಶಾನ್ಯ ಕರ್ನಾಟಕ ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ್ರೆ ನಷ್ಟದ ಪ್ರಮಾಣ ಇನ್ನಷ್ಟು ಏರಿಕೆಯಾಗಲಿದೆ ಅನ್ನುವ ಕುರಿತು ಚರ್ಚೆಗಳು ಶುರುವಾಗಿದೆ.

ಇದನ್ನೂ ಓದಿ : Karnataka education : ಕರ್ನಾಟಕದಲ್ಲಿ ನಾಳೆಯಿಂದ ಶಾಲೆಗಳು ಪುನರಾರಂಭ : ಮಕ್ಕಳ ಸ್ವಾಗತಕ್ಕೆ ಶಾಲೆಗಳು ಸಜ್ಜು

ಈಗಾಗಲೇ ನಷ್ಟದಲ್ಲಿರುವ ಸಾರಿಗೆ ನಿಗಮಗಳು ಲಾಭದಾಯಕ ಹಾದಿಯಲ್ಲೇ ನಿಗಮಗಳನ್ನು ನಡೆಸುವ ನಿಟ್ಟಿನಲ್ಲಿ ಸಲಹೆ ನೀಡಲು ಹಿಂದಿನ ಸರಕಾರ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಆರ್‌ ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲಾ ಮಹಿಳೆಯರಿಗೂ ಸರಕಾರಿ ಬಸ್‌ಗಳಲ್ಲಿ ಉಚಿತ ಅವಕಾಶ ಕಲ್ಪಿಸಿದರೆ ಆರ್ಥಿಕ ನಿರ್ವಹಣೆಗೆ ಸವಾಲಿನಂತೆ ಕಂಡಿದೆ. ಹೀಗಾಗಿ ಹೆಚ್ಚಿನ ಸಾರಿಗೆ ನಿಗಮಗಳ ಉನ್ನತ ಅಧಿಕಾರಿಗಳು ಮೌಖಿಕವಾಗಿ ಸರಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

Free travel for women in buses from tomorrow

Comments are closed.