Ganesh Chaturthi : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಪಾಲಿಕೆಯ ಐತಿಹಾಸಿಕ ತೀರ್ಮಾನ

ಹುಬ್ಬಳ್ಳಿ : (Ganesh Chaturthi Hubli Eidga) ಚಾಮರಾಜಪೇಟೆಯಈದ್ಗಾ ಮೈದಾನದ ಬಳಿಕ ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಈದ್ಘಾ ಮೈದಾನದಲ್ಲಿ ಕೊನೆಗೂ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅನುಮತಿ ನೀಡಿದ್ದು, ಹುಬ್ಬಳ್ಳಿ ಮಹಾನಗರ ಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ. ವಿವಾದಿತ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ ಆಚರಿಸಲು ಹಾಗೂ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲು ಅವಕಾಶವಿದೆ ಎಂದು ಹುಬ್ಬಳ್ಳಿ ಮಹಾನಗರ ಪಾಲಿಕೆಯ ಮೇಯರ್ ಈರೇಶ್ ಆದೇಶ ಪ್ರಕಟಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೆಂದು ವಿವಿಧ ಸಂಘಟನೆಗಳು ಆಗ್ರಹಿಸುತ್ತ ಬಂದಿದ್ದವು. ಒಟ್ಟು ಆರು ಸಂಘಟನೆಗಳಿಂದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೆಂದು ಅರ್ಜಿ ಸಲ್ಲಿಕೆಯಾಗಿದ್ದರೇ, ಗಣೇಶೋತ್ಸವಕ್ಕೆ ಅವಕಾಶ ನೀಡಬಾರದೆಂದು 11 ಅರ್ಜಿಗಳು ಸಲ್ಲಿಕೆಯಾಗಿದ್ದವು.ಈ ಬಗ್ಗೆ ವಿವರಣೆ ನೀಡಿದ ಮೇಯರ್ ಈರೇಶ್ ಗಣೇಶೋತ್ಸವದ ಬಗ್ಗೆ ಸಲ್ಲಿಕೆಯಾದ ಅರ್ಜಿಗಳನ್ನು ಸರ್ವ ಪಕ್ಷಗಳ ಸಮ್ಮುಖದಲ್ಲಿ ಚರ್ಚಿಸಿ ಒಂದು ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದೆ ಎಂದು ಮೇಯರ್ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಹಾಗೂ ಪೂಜೆಗೆ ಅವಕಾಶ ನೀಡಬೇಕೆಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರು ಆಗ್ರಹಿಸಿದ್ದರು.ಅಲ್ಲದೇ ಪಾಲಿಕೆ ಎದುರು ಗಣೇಶೋತ್ಸವಕ್ಕೆ ಆಗ್ರಹಿಸಿ ಗಣಪತಿಯ ಮುಖವಾಡ ಧರಿಸಿ ಪ್ರತಿಭಟನೆ ಕೂಡ ನಡೆಸಿದ್ದರು. ಅಲ್ಲದೇ ಒಂದೊಮ್ಮೆ ಗಣೇಶೋತ್ಸವಕ್ಕೆ ಅನುಮತಿ ನೀಡದೇ ಇದ್ದಲ್ಲಿ, ಪ್ರಹ್ಲಾದ್ ಜೋಷಿ ಸೇರಿದಂತೆ ವಿವಿಧ ಬಿಜೆಪಿ ನಾಯಕರ ಮನೆ ಎದುರು ಗಣೇಶಪ್ರತಿಮೆಯೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು.

ಇದೆಲ್ಲದರ ಬೆನ್ನಲ್ಲೇ ಈಗ ಮೂರು ದಿನಗಳ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ. ಈ ಭಾರಿ ಮೂರು ದಿನಗಳ ಕಾಲ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಗಣೇಶೋತ್ಸವದ ಅವಧಿಯನ್ನು ಹೆಚ್ಚಿಸುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಹಿಂದಿನಿಂದಲೂ ವಿವಾದಿತ ಸ್ಥಳವಾಗಿರುವ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡೋದು ಎಷ್ಟು ಸೂಕ್ತ ಎಂಬುದರ ಬಗ್ಗೆಯೂ ಈಗಾಗಲೇ ಹಲವು ಭಾರಿ‌ ಚರ್ಚೆ ನಡೆದಿದೆ. ಸರ್ಕಾರಕ್ಕೆ ಇದು ಸವಾಲಿನ ತೀರ್ಮಾನ ವಾಗಿದ್ದು ಭದ್ರತೆಯ ದೃಷ್ಟಿಯಿಂದ ಕೂಡ ಇದು ಅತಿ ಸೂಕ್ಷ್ಮ ತೀರ್ಮಾನ ಎಂದೇ ಪರಿಗಣಿಸಲಾಗುತ್ತಿದೆ.

ಇದನ್ನೂ ಓದಿ : LPG ಗ್ರಾಹಕರಿಗೆ ಸಂತಸದ ಸುದ್ದಿ: 750 ರೂಪಾಯಿಗೆ ಪಡೆಯಿರಿ ಗ್ಯಾಸ್‌ ಸಿಲಿಂಡರ್‌

ಇದನ್ನೂ ಓದಿ : KMF Milk Price Hike Karnataka : ರೈತರಿಗೆ ಸಿಹಿ ಗ್ರಾಹಕರಿಗೆ ಕಹಿ : ಶೀಘ್ರದಲ್ಲೇ ಹಾಲಿನ ದರ ಏರಿಕೆ ಸುಳಿವುಕೊಟ್ಟ ಕೆಎಂಎಫ್

Ganesh Chaturthi Hubli Eidga Maidan A Historical Conclusion of the Corporation

Comments are closed.