ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಜಾರಿಗೆ ತಂದಿದೆ. ಗೃಹಲಕ್ಷ್ಮೀ (Gruha Lakshmi Scheme), ಅನ್ನಭಾಗ್ಯ (Anna Bhagya Scheme) , ಗೃಹಜ್ಯೋತಿ (Gruha Jyothi) , ಶಕ್ತಿ ಯೋಜನೆಗಳು (Shakthi Yojana) ಜನರಿಗೆ ವರದಾನವಾಗಿ ಪರಿಣಮಿಸಿದೆ. ಇದೀಗ ಸರಕಾರ ಬಿಪಿಎಲ್ ಕಾರ್ಡುದಾರರಿಗೆ (BPL Card Holders) ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ.
ಅನ್ನಭಾಗ್ಯ ಯೋಜನೆಯ ಮೂಲಕ ರಾಜ್ಯ ಸರಕಾರ ಹೆಚ್ಚುವರಿ ಅಕ್ಕಿಯನ್ನು ನೀಡುತ್ತಿದೆ. ಈ ಹಿಂದೆ ಬಿಪಿಎಲ್ ಕುಟುಂಬದ ಪ್ರತೀ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಆದ್ರೆ ಇದೀಗ ರಾಜ್ಯ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿರುವ ಗ್ಯಾರಂಟಿ ಯೋಜನೆಯ ಪ್ರಕಾರ ಹೆಚ್ಚುವರಿ ಐದು ಕೆಜಿಯನ್ನು ಘೋಷಣೆ ಮಾಡಿದೆ.

ಅನ್ನಭಾಗ್ಯ ಯೋಜನೆಯಡಿ ಪ್ರತೀ ಕುಟುಂಬದ ಪ್ರತೀ ಸದಸ್ಯರಿಗೆ ಕೇಂದ್ರ ಸರಕಾರದ 5 ಕೆಜಿ ಹಾಗೂ ರಾಜ್ಯ ಸರಕಾರದ ೫ ಕೆಜಿ ಅಕ್ಕಿ ನೀಡಬೇಕಾಗಿತ್ತು. ಆದರೆ ಅಕ್ಕಿಯ ಕೊರತೆಯಿಂದಾಗಿ ರಾಜ್ಯ ಸರಕಾರ ತಾನು ಕೊಡಬೇಕಾಗಿದ್ದ ಅಕ್ಕಿಯ ಬದಲು ನಗದು ಪಾವತಿ ಮಾಡುತ್ತಿದೆ. ಕಳೆದ ಮೂರು ತಿಂಗಳಿನಿಂದಲೂ ಕರ್ನಾಟಕ ರಾಜ್ಯದಲ್ಲಿ ಈ ಯೋಜನೆ ಜಾರಿಯಲ್ಲಿದೆ.
ಇದನ್ನೂ ಓದಿ : 10 ಲಕ್ಷ ಮಹಿಳೆಯರಿಗೆ ಇಲ್ಲ ಗೃಹಲಕ್ಷ್ಮೀ ಭಾಗ್ಯ
ಈ ನಡುವಲ್ಲೇ ರಾಜ್ಯ ಸರಕಾರ ಬಿಪಿಎಲ್ ಕಾರ್ಡುದಾರರಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದೆ. ಅದ್ರಲ್ಲೂ ಬಿಪಿಎಲ್ ಕಾರ್ಡು ಹೊಂದಿರುವ ಹಿರಿಯ ನಾಗರೀಕರಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಈ ಹೊಸ ಯೋಜನೆಯ ಮೂಲಕ ರಾಜ್ಯದಲ್ಲಿರುವ 90 ವರ್ಷ ಮೇಲ್ಪಟ್ಟವರ ಮನೆ ಬಾಗಿಲಿಗೆ ಇಲಾಖೆ ಪಡಿತರ ಸಾಮಗ್ರಿಗಳನ್ನು ತಲುಪಿಸಲಿದೆ.
ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆಯು ಈಗಾಗಲೇ ಯೋಜನೆಯನ್ನು ಜಾರಿಗೆ ತಂದಿದ್ದು, ಆರ್ಥಿಕ ಇಲಾಖೆಯ ಅನುಮತಿಗಾಗಿ ಕಾಯುತ್ತಿದೆ. ಅನುಮೋದನೆ ಸಿಕ್ಕ ಕೂಡಲೇ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಅಲ್ಲದೇ ಸುವಿಧ ಆಪ್ ಜಾರಿಗೆ ತರುವ ನಿಟ್ಟಿನಲ್ಲಿ ಸಿದ್ದತೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರು ಆಪ್‌ಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ : ಸರಕಾರದ ಹೊಸ ರೂಲ್ಸ್ : ನವೆಂಬರ್ 1 ರಿಂದ ಬದಲಾಗಲಿದೆ ಈ ನಾಲ್ಕು ನಿಯಮ
ಇಳಿ ವಯಸ್ಸಿನಲ್ಲಿ ಪಡಿತರ ಸಾಮಗ್ರಿಗಳನ್ನು ಕೊಳ್ಳಲು ಬರಲು ಸಾಧ್ಯವಾಗದೇ ಇರುವವರಿಗೆ ಈ ಯೋಜನೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಆರಂಭಗೊಂಡಿದ್ದು, ನವೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ ಅಧಿಕೃತವಾಗಿ ಈ ಯೋಜನೆ ಜಾರಿಗೆ ಬರಲಿದೆ.

ರಾಜ್ಯ ಸರಕಾರ ಈ ಯೋಜನೆಯನ್ನು ಯಾವಾಗ ಆರಂಭ ಮಾಡಲಾಗುತ್ತದೆ ಅನ್ನೋದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಆಹಾರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸಲುವಾಗಿ ಪ್ರತೀ ಮನೆಯಿಂದ ೫೦ ರೂಪಾಯಿ ಡೆಲಿವರಿ ಶುಲ್ಕ ಪಡೆಯುವ ಸಾಧ್ಯತೆಯಿದೆ.
ಇದನ್ನೂ ಓದಿ : 3.26 ಲಕ್ಷ ರೇಷನ್ ಕಾರ್ಡ್ ರದ್ದು ! ರಾತ್ರೋ ರಾತ್ರಿ ಜಾರಿಯಾಯ್ತು ಹೊಸ ರೂಲ್ಸ್
ಪಡಿತರ ಸಾಮಗ್ರಿಗಳನ್ನು ಅಂಗಡಿಯವರೇ ಪ್ಯಾಕ್ ಮಾಡಿ ಕೊಡಬೇಕು. ಅಲ್ಲದೇ ಹಂಚಿಕೆ ಮಾಡಿರುವ ಪೋಟೋಗಳನ್ನು ಆಪ್ ನಲ್ಲಿ ಅಪ್ಲೋಡ್ ಮಾಡಬೇಕು. ಹೀಗೆ ಹಲವು ನಿಯಮಗಳನ್ನು ರೂಪಿಸುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಅನ್ನಭಾಗ್ಯ ಯೋಜನೆಯ ಬೆನ್ನಲ್ಲೇ ರಾಜ್ಯದಲ್ಲಿ ಜಾರಿಯಾಗಲಿರುವ ಹೊಸ ಯೋಜನೆ ಬಡವರ ಪಾಲಿಗೆ ವರದಾನವಾಗುವ ಸಾಧ್ಯತೆಯಿದೆ.
Good news for BPL card holders new scheme has been implemented by the government after Gruha Lakshmi and Anna Bhagya Scheme