Good News soldiers : ಸೈನಿಕರು, ಮಾಜಿ ಸೈನಿಕರಿಗೆ ತ್ವರಿತ ಭೂಮಿ, ನಿವೇಶನ ತುರ್ತು ಮಂಜೂರಿಗೆ ಸರಕಾರದ ಆದೇಶ

ಬೆಂಗಳೂರು : Good News soldiers : ದೇಶ ಕಾಯುವ ಯೋಧರಿಗೆ ರಾಜ್ಯ ಸರಕಾರ ಗುಡನ್ ನ್ಯೂಸ್ ಕೊಟ್ಟಿದೆ. ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಉಚಿತವಾಗಿ ನಿವೇಶನ ಹಾಗೂ ಜಮೀನು ನೀಡುವ ಕಾರ್ಯದಲ್ಲಿ ವಿಳಂಬವಾಗುತ್ತಿದ್ದು, ತ್ವರಿತವಾಗಿ ಮಂಜೂರು ಮಾಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಆಯಾಯ ಜಿಲ್ಲಾಧಿಕಾರಿಗಳು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಯಾವುದಾದರೂ ತಾಲೂಕಿನಲ್ಲಿ ಜಮೀನು ಹಾಗೂ ನಿವೇಶನ ಮಂಜೂರಾತಿಗಾಗಿ ಲಭ್ಯವಿದ್ದಲ್ಲಿ ಮಂಜೂರು ಮಾಡಲು ಕ್ರಮವಹಿಸುವಂತೆ ತಿಳಿಸಲಾಗಿದೆ. ಅಲ್ಲದೇ ಇದಲ್ಲದೇ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಲಭ್ಯವಿಲ್ಲದ ಪಕ್ಷದಲ್ಲಿ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ನಗರ ಪ್ರದೇಶದಲ್ಲಿ 1200 ಚದರ ಅಡಿ ವಿಸ್ತೀರ್ಣದ ನಿವೇಶನವನ್ನು ಅಥವಾ ಗ್ರಾಮೀಣ ಪ್ರದೇಶದಲ್ಲಿ 2400 ಚದರ ಅಡಿ ವಿಸ್ತೀರ್ಣದ ನಿವೇಶನವನ್ನು ಜಾರಿಯಲ್ಲಿರುವ ಸರ್ಕಾರದ ಯಾವುದೇ ವಸತಿ ಯೋಜನೆಯಡಿ, ಯಾವುದೇ ವಿಶೇಷ ಯೋಜನೆಯಡಿ ನಿವೇಶನವನ್ನು ಮಂಜೂರು ಮಾಡುವಂತೆ ಕ್ರಮ ವಹಿಸಲು ಸೂಚಿಸಿದ್ದಾರೆ.

ರಾಜ್ಯದಲ್ಲಿ ತುರ್ತು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯದ ಪ್ರತಿ ಗ್ರಾಮದಲ್ಲಿ ವಿಲೇವಾರಿಗೆ ಲಭ್ಯವಿರುವ ಜಮೀನಿನ ಪೈಕಿ ಶೇ.10ರಷ್ಟು ಜಮೀನನ್ನು ಸೈನಿಕ, ಮಾಜಿ ಸೈನಿಕರಿಗೆ ಕಾಯ್ದಿರಸಲು ಅವಕಾಶ ಕಲ್ಪಿಸಲಾಗಿರುವುದಾಗಿ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸೈನಿಕ, ಮಾಜಿ ಸೈನಿಕರಿಗೆ ಅವರ ಸೇವಾ ರಿಜಿಸ್ಟರ್ ನಲ್ಲಿ ನಮೂದಿಸಿರುವ ಸ್ಥಳೀಯ ತಾಲೂಕಿನಲ್ಲಿ ಅಥವಾ ಸಂಬಂಧ ಪಟ್ಟ ಜಿಲ್ಲೆಯಲ್ಲಿ ಭೂ ಲಭ್ಯತಾ ಪಟ್ಟಿಯಂತೆ ಸರ್ಕಾರಿ ಜಮೀನು ಲಭ್ಯವಿದ್ದಲ್ಲಿ, ಉಚಿತವಾಗಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ.

Good News Government order for urgent allotment of land and plot to soldiers, ex-servicemen

ಸೈನಿಕ, ಮಾಜಿ ಸೈನಿಕರಿಗೆ ಜಮೀನು ಮಂಜೂರಾತಿ ಕೋರಿ ಸ್ವೀಕೃತವಾಗುವ ಅರ್ಜಿಗಳನ್ನು ವರ್ಗಾಯಿಸುವ ಬಗ್ಗೆ ಸ್ಪಷ್ಟೀಕರಣ ಕೋರಿ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆಗಳು ಸ್ವೀಕೃತವಾಗುತ್ತಿವೆ. ಈ ಹಿನ್ನೆಲೆಯಯಲ್ಲಿ ಭೂ ಲಭ್ಯತಾ ಪಟ್ಟಿಯಂತೆ ಸರ್ಕಾರಿ ಜಮೀನು ಲಭ್ಯವಿದ್ದಲ್ಲಿ, ಉಚಿತವಾಗಿ ಮಂಜೂರು ಮಾಡಲು ನಿಯಮಾನುಸಾರ ಕ್ರಮವಹಿಸುವಂತೆ ಸೂಚಿಸಿದೆ.

Good News Government order for urgent allotment of land and plot to soldiers, ex-servicemen

ಇದನ್ನೂ ಓದಿ : Credit Card Payment Update : ಕ್ರೆಡಿಟ್‌ ಕಾರ್ಡ್‌ ಬಳಕೆದಾರರಿಗೆ ಬಿಗ್‌ ರಿಲೀಫ್‌ : ಬಾಕಿ ಹಣ ಪಾವತಿಸಲು RBI ಹೊಸ ರೂಲ್ಸ್‌

ಇದನ್ನೂ ಓದಿ : Muruga Mutt: ಮುರುಘಾ ಮಠದ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ

Good News Government order for urgent allotment of land and plot to soldiers, ex-servicemen

Comments are closed.