Good News: ಕನ್ನಡ ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರ ಗಮನಕ್ಕೆ ವಿಶೇಷ ಸೂಚನೆ

ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ: 10.03.2022 ರಿಂದ 15.03.2022ರವರೆಗೆ ಆರು ದಿನಗಳ ಕಾಲ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022”ನ್ನು ಮಹಾರಾಜ ಕಾಲೇಜು ಮೈದಾನ, ಮೈಸೂರು (Mysuru) – ಇಲ್ಲಿ ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ (Good News) ಭಾಗವಹಿಸಲು ಆಸಕ್ತಿ ಇರುವ ರಾಜ್ಯದ ಎಲ್ಲಾ ಕನ್ನಡ ಪುಸ್ತಕ ಪ್ರಕಾಶಕರು / ಮಾರಾಟಗಾರರು ಅರ್ಜಿ ಸಲ್ಲಿಸಿ ಮಾರಾಟ ಮಳಿಗೆಯನ್ನು ಕಾಯ್ದಿರಿಸಲು ಕೋರಿದೆ. ಅರ್ಜಿ ಸಲ್ಲಿಸಲು 08.03.2022ರಂದು ಸಂಜೆ 5.00ಗಂಟೆಯವರೆಗೆ ಅವಕಾಶ ಕಲ್ಪಿಸಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲಎಂದು ಕನ್ನಡ ಪುಸ್ತಕ ಪ್ರಾಧಿಕಾರ (Kannada Pustaka Pradhikara ) ಮಾಹಿತಿ ನೀಡಿದೆ.

ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಂದರೆ www.kannadapustakapradhikara.com ನಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

Good News ಸುದ್ದಿ ಹೊರಬಿತ್ತು
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ಒಂದು ದಿನಕ್ಕೆ ರೂ.500/-ರಂತೆ ಆರು(06) ದಿನಗಳಿಗೆ ರೂ.3,000-00ಗಳ ಬಾಡಿಗೆ ಹಾಗೂ ಒಂದು ಮಳಿಗೆಗೆ ರೂ.1,000-00ಗಳ ಠೇವಣಿ ಮೊತ್ತದ ಪ್ರತ್ಯೇಕ ಡಿ.ಡಿ.ಗಳನ್ನು ಆಡಳಿತಾಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿ.ಡಿ.ಯನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:08.03.2022ರಂದು ಸಂಜೆ 5.00ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ [email protected] ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಸಂಪರ್ಕಕ್ಕೆ ಹೇಗೆ?

ಹೆಚ್ಚಿನ ಮಾಹಿತಿಗಾಗಿ : ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಅಂದರೆ www.kannadapustakapradhikara.com ನಲ್ಲಿ ಅಥವಾ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 / 22107704 ಅನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: Maha Shivaratri 2022: ಮಹಾ ಶಿವರಾತ್ರಿ ಉಪವಾಸ ಆಚರಣೆ ಹೀಗಿರಲಿ

(Good News Kannada Pustaka pradhikara called for Kannada Book publisher and sellers shops)

Comments are closed.