ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ವಿಚಾರದಲ್ಲಿ ಜೀವನ ಕ್ಕಿಂತ ಜೀವ ಮುಖ್ಯ. ಅಗತ್ಯಬಿದ್ದರೆ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿ ಎಂದು ರಾಜ್ಯಪಾಲ ವಾಜುಬಾಯಿ ವಾಲಾ ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರಲ್ಲಿಂದು ರಾಜ್ಯಪಾಲ ವಾಜುಬಾಯಿ ವಾಲಾ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯ ನಂತರದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್ ಸೋಂಕಿನ ವಿಚಾರದಲ್ಲಿ ಯಾವುದೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ಮುಖಂಡರಾದ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಆರೋಗ್ಯ ಸಚಿವ ಸುಧಾಕರ್, ಗೃಹ ಸಚಿವ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.