ಬೆಂಗಳೂರು : ಲಾಕ್ ಡೌನ್ ಹೇರಿಕೆಯ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಕಲಾವಿದರ ನೆರವಿಗೆ ರಾಜ್ಯ ಸರಕಾರ ಮುಂದಾಗಿದೆ. ಕಲಾವಿದರಿಗೆ ತಲಾ 3000 ರೂ. ಆರ್ಥಿಕ ನೆರವು ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಲಾವಿದರಿಗೆ ನೆರವು ನೀಡಲಾಗುತ್ತಿದೆ. ಯೋಜನೆಯ ಅಡಿಯಲ್ಲಿ ಸಹಾಯಧನ ಪಡೆಯಲು ಇಚ್ಚಿಸುವವರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಜೂನ್ 5ರ ಒಳಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಕಲಾವಿದರ ಖಾತೆಗಳಿಗೆ ನೇರವಾಗಿ ಸಹಾಯಧನದ ಹಣ ಜಮೆಯಾಗಲಿದೆ. ಈ ಮೂಲಕ ರಾಜ್ಯದ ಸಾವಿರಾರು ಕಲಾವಿದರಿಗೆ ನೆರವು ದೊರೆಯಲಿದೆ.