GOOD NEWS : ಸರಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ತುಟ್ಟಿಭತ್ಯೆ ಶೇ.21.50ಕ್ಕೆ ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ಸರಕಾರಿ ನೌಕರರಿಗೆ ರಾಜ್ಯ ಸರಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ(DA)ಯನ್ನು ಶೇ.11.25ರಿಂದ ಶೇ.21.50ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಜುಲೈ.1, 2021ರಿಂದಲೇ ಪರಿಷ್ಕೃತ ಆದೇಶ ಜಾರಿಗೆ ಬಂದಿದೆ.

ರಾಜ್ಯ ಸರಕಾರಿ ನೌಕರರು, ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಇದು ಅನ್ವಯವಾಗಲಿದೆ.

ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಉಮಾ.ಕೆ ಅವರು ಆದೇಶ ಹೊರಡಿಸಿದ್ದು, 2020 ಜನವರಿ 1ರಿಂದ 2021ಜೂನ್‌ 30ರ ಅವಧಿಯ ಹೆಚ್ಚುವರಿ ತುಟ್ಟಿ ಭತ್ಯೆ ಕಂತುಗಳನ್ನು ಬಿಡುಗಡೆ ಮಾಡಲು ರಾಜ್ಯ ಸರಕಾರ ಸೂಚಿಸಿದೆ. ಅಂತೆಯೇ ಹೊಸ ಆದೇಶ 2021ಜುಲೈ 1ರಿಂದಲೇ ಜಾರಿಗೆ ಬರಲಿದೆ.

ಈ ಮೂಲಕ ಸರಕಾರಿ ನೌಕರರಿಗೆ ಈ ಹಿಂದೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನೀಡಲಾಗುವ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 11.25 ರಿಂದ ಶೇಕಡ 21.50ಕ್ಕೆ ಪರಿಷ್ಕರಣೆ ಮಾಡಲಾಗಿದೆ.

.

Comments are closed.