Puneeth Rajkumar’s birthday :ಪುನೀತ್​ ರಾಜ್​ಕುಮಾರ್​ ಜನ್ಮದಿನವನ್ನು ಸ್ಫೂರ್ತಿ ದಿನವನ್ನಾಗಿ ಆಚರಿಸಲು ಸರ್ಕಾರದ ನಿರ್ಧಾರ

ಬೆಂಗಳೂರು :Puneeth Rajkumar’s birthday : ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​​ ನಮ್ಮನಗಲಿ ಒಂದು ವರ್ಷ ಕಳೆಯಲು ಇನ್ನೇನು ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಆದರೂ ಸಹ ಅಭಿಮಾನಿಗಳ ಮನಸ್ಸಿನಲ್ಲಿ ಅಪ್ಪು ಇನ್ನೂ ಜೀವಂತವಾಗಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಪುನೀತ್​ ರಾಜ್​ಕುಮಾರ್​ ಮರಣೋತ್ತರ ಕರ್ನಾಟಕ ರತ್ನವನ್ನು ನೀಡಿ ಗೌರವಿಸಿದೆ. ಇದರ ಜೊತೆಯಲ್ಲಿ ಇದೀಗ ಪುನೀತ್​ ಗೌರವಾರ್ಥ ಮತ್ತೊಂದು ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಾರ್ಚ್ 17ರಂದು ಪುನೀತ್​ ರಾಜ್​ಕುಮಾರ್​​ ಜನ್ಮದಿನವನ್ನು ಸ್ಪೂರ್ತಿ ದಿನವನ್ನಾಗಿ ಸರ್ಕಾರದ ವತಿಯಿಂದ ಆಚರಿಸುವುದಾಗಿ ಹೇಳಿದ್ದಾರೆ.

ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನಕ್ಕೆ ಆಗಮಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಜನ್ಮದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ಸಾಕಷ್ಟು ಮನವಿ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಈ ನಿರ್ಧಾರ ಘೋಷಿಸಿದ್ದಾರೆ.

ಈ ವಿಚಾರವಾಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್​ ರಾಜ್​ಕುಮಾರ್​​ ನನಗೆ ವೈಯಕ್ತಿಕವಾಗಿ ಅತ್ಯಂತ ಪ್ರೀತಿಪಾತ್ರರಾಗಿದ್ದ ವ್ಯಕ್ತಿ. ನಾಡಿನ ಯುವಕರಿಗೆ ಅವರೊಂದು ಸ್ಪೂರ್ತಿ. ಅವರ ಅಕಾಲಿಕ ನಿಧನವು ಕರ್ನಾಟಕಕ್ಕೆ ತುಂಬಲಾರದ ಒಂದು ನಷ್ಟವಾಗಿದೆ. ತಮ್ಮ ಜೀವನದುದ್ದಕ್ಕೂ ಯುವಕರಿಗೆ ಸ್ಫೂರ್ತಿ ನೀಡಿರುವ ಪುನೀತ್​ ರಾಜ್​ಕುಮಾರ್​ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರ ಆಚರಿಸಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಬ್ರಹ್ಮಶ್ರೀ ನಾರಾಯಣಗುರು ಬಗ್ಗೆ ಮಾತನಾಡಿದ ಅವರು , ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ನಾವು ಒಂದು ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತ ಮಾಡಲು ಸಾಧ್ಯವಿಲ್ಲ. ಅವರೊಬ್ಬ ಆಧ್ಯಾತ್ಮಿಕ ಸಂತರಾಗಿದ್ದವರು. ಅವರ ಜೀವನ ಇಡೀ ಜಗತ್ತಿಗೆ ಮಾದರಿಯಾಗಿದೆ. ಈಡಿಗ- ಬಿಲ್ಲವ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇನ್ನಿತರ ಅಭಿವೃದ್ಧಿಗೆ ಪ್ರತ್ಯೇಕ ನಿಧಿಯನ್ನು ಪ್ರಾರಂಭಿಸುತ್ತೇವೆ . ಬೆಂಗಳೂರಿನಲ್ಲಿ ನಾರಾಯಣ ಗುರು ಹೆಸರಿನಲ್ಲಿ ಸಭಾಭವನ ನಿರ್ಮಿಸಲು ಐದು ಕೋಟಿ ರೂಪಾಯಿಗಳನ್ನು ಶೀಘ್ರದಲ್ಲಿಯೇ ಮಂಜೂರು ಮಾಡುತ್ತೇವೆ ಎಂದು ಹೇಳಿದರು .

ಇದನ್ನು ಓದಿ : BREAKING : ಐಪಿಎಲ್​ ಸೇರಿದಂತೆ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ರಾಬಿನ್​ ಉತ್ತಪ್ಪ ನಿವೃತ್ತಿ ಘೋಷಣೆ

ಇದನ್ನೂ ಓದಿ : Asad Rauf died : ಮಾಜಿ ಐಸಿಸಿ ಅಂಪೈರ್, ಪಾಕಿಸ್ತಾನದ ಅಸಾದ್ ರೌಫ್ ಹೃದಯಾಘಾತದಿಂದ ನಿಧನ

Government’s decision to celebrate Puneeth Rajkumar’s birthday as inspiration day

Comments are closed.