ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರಕಾರವು ಜನರ ಆರ್ಥಿಕ ಸುಧಾರಣೆಗಾಗಿ ಐದು ಗ್ಯಾರಂಟಿ ಯೋಜನೆಗಳಲ್ಲಿ (Gruha Jyoti scheme) ಒಂದೊಂದಾಗಿ ಜಾರಿಗೊಳಿಸಿದೆ. ಅದರಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ನೋಂದಾಯಿಸಿಕೊಳ್ಳಲು ಇಂದು ಕೊನೆಯ ದಿನವಾಗಿದೆ. ಈ ಯೋಜನೆಯಡಿ ನೋಂದಾಯಿಸಿಕೊಂಡವರಿಗೆ ಮಾತ್ರ ಆಗಸ್ಟ್ ತಿಂಗಳ ಕರೆಂಟ್ ಬಿಲ್ ಉಚಿತವಾಗಲಿದೆ.
ಈ ಯೋಜನೆಗೆ ನೋಂದಾಣಿ ಪ್ರಾರಂಭಗೊಂಡ ನಂತರ, ರಾಜ್ಯದಲ್ಲಿ ಇಲ್ಲಿಯವರೆಗೆ ಶೇ. 60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಶೇ. 40 ರಷ್ಟು ವಿದ್ಯುತ್ ಗ್ರಾಹಕರು ನೋಂದಾಣಿ ಮಾಡುವುದು ಬಾಕಿ ಉಳಿದಿದೆ ಎಂದು ವರದಿ ತಿಳಿಸಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿ ನೀಡಿರುವ ಮಾಹಿತಿ ಪ್ರಕಾರ, ಸುಮಾರು 1.92 ಕೋಟಿ ಗೃಹ ಬಳಕೆದಾರರಿದ್ದು, ಇದರಲ್ಲಿ ಶೇ. 90ಕ್ಕೂ ಅಧಿಕ ಜನರು ಮಾಸಿಕ 200 ಯೂನಿಟ್‌ಇಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಎಂದು ತಿಳಿಸಿದೆ. ಇದರಲ್ಲಿ 1.18 ರಿಂದ 1.20 ಕೋಟಿ ಮಂದಿ ಮಾತ್ರವೇ ನೋದಣಿ ಮಾಡಿಕೊಂಡಿದ್ದು, ಉಳಿದವರು ಇನ್ನೂ ನೋಂದಣಿ ಮಾಡಿಕೊಳ್ಳಬೇಕಿದೆ.
ಇದನ್ನೂ ಓದಿ : ಕರಾವಳಿಯಲ್ಲಿ ಭಾರೀ ಮಳೆ ರೆಡ್ ಅಲರ್ಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಮೊದಲ ತಿಂಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಜುಲೈ 25ರ ಇಂದೇ ನೋಂದಾಣಿಗೆ ಕೊನೆಯ ದಿನವಾಗಿದೆ. ಇಂದು ಯಾರೆಲ್ಲಾ ಗೃಹ ಜ್ಯೋತಿ ನೋಂದಾಣಿ ಮಾಡಿಕೊಳ್ಳಲಿದ್ದಾರೋ ಅವರಿಗೆಲ್ಲಾ ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಬರಲಿದೆ. ಒಂದು ವೇಳೆ ನೋಂದಾಯಿಸಿಕೊಳ್ಳದಿದ್ದರೇ ಆಗಸ್ಟ್ ನಂತರದ ತಿಂಗಳಿನ ಬಿಲ್ ಉಚಿತವಾಗಿ ಬರಲಿದೆ. ಈ ಯೋಜನೆಗೆ ಅಂತಿಮ ಗಡುವು ನಿಗದಿ ಪಡಿಸಿಲ್ಲ. ಸೆಪ್ಟೆಂಬರ್‌ನಲ್ಲಿ ಇದರ ಲಾಭ ಪಡೆಯಲು ಅವಕಾಶ ಇದೆ. ಇದೇ ಆಗಸ್ಟ್ ತಿಂಗಳಿನಲ್ಲಿ ಉಚಿತ 200 ಯೂನಿಟ್ ವಿದ್ಯುತ್ ಪ್ರಯೋಜನ ಪಡೆಯಲು ಇಂದು ನೋಂದಾಣಿ ಮಾಡಿಸಬೇಕಿದೆ.
Gruha Jyoti scheme : Today is the last day for registration of Gruha Jyoti scheme