ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ ಹಣ : ಗೃಹಿಣಿಯರಿಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಸರಕಾರ

ಗೃಹಲಕ್ಷ್ಮಿ ಯೋಜನೆಯಡಿ (Gruha Lakshmi scheme) ಅಕ್ಟೋಬರ್ 2ನೇ ವಾರದಲ್ಲಿ 2ನೇ ಕಂತಿನ ಹಣ (Gruha Lakshmi 2nd Installment) ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಗೃಹಲಕ್ಷ್ಮಿ ಯೋಜನೆಯಡಿ (Gruha Lakshmi scheme) ಮನೆಯ ಯಜಮಾನಿಯ ಬ್ಯಾಂಕ್‌ ಖಾತೆಗೆ ಮೊದಲ ಕಂತಿನ ಹಣ (DBT)  ಈಗಾಗಲೇ ವರ್ಗಾವಣೆಯಾಗಿದ್ದು, ಇದೀಗ ಅಕ್ಟೋಬರ್ 2ನೇ ವಾರದಲ್ಲಿ 2ನೇ ಕಂತಿನ ಹಣ (Gruha Lakshmi 2nd Installment) ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಗೃಹಲಕ್ಷ್ಮೀ ಯೋಜನೆಯ ಮೂಲಕ ಕರ್ನಾಟಕ ರಾಜ್ಯದ ಕೋಟ್ಯಾಂತರ ಮಹಿಳೆಯರ ಬ್ಯಾಂಕ್‌ ಖಾತೆಗೆ ಪ್ರತೀ ತಿಂಗಳು 2000 ರೂಪಾಯಿ ಹಣವನ್ನು ಜಮೆ ಮಾಡಲಾಗುತ್ತದೆ. ಈಗಾಗಲೇ ಮೊದಲ ಕಂತಿನ ಹಣವನ್ನು ಸೆಪ್ಟೆಂಬರ್‌ ತಿಂಗಳಿನಲ್ಲಿ ವರ್ಗಾವಣೆ ಮಾಡಲಾಗಿದೆ.

Gruha Lakshmi scheme good news 2nd installment money deposit date announced October 2nd week
Image Credit to Original Source

ಇದನ್ನೂ ಓದಿ : APL, BPL ಕಾರ್ಡ್‌ದಾರರಿಗೆ ಗುಡ್‌ನ್ಯೂಸ್‌ : ರೇಷನ್‌ ಕಾರ್ಡ್‌ ತಿದ್ದುಪಡಿಗೆ ಮಹತ್ವದ ಸೂಚನೆ

ರಾಜ್ಯ ಸರಕಾರ ಈ ನಡುವಲ್ಲೇ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಗುಡ್‌ನ್ಯೂಸ್‌ ಕೊಟ್ಟಿದೆ. ಇದೀಗ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡುವುದಾಗಿ ಘೋಷಣೆಯನ್ನು ಮಾಡಿದೆ. ಇದಕ್ಕೆ ಬೇಕಾದ ಸಿದ್ದತೆಗಳನ್ನು ಮಾಡಿಕೊಂಡಿದೆ.

ಕರ್ನಾಟಕ ರಾಜ್ಯದಲ್ಲಿ 1.26 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಪೈಕಿ 1.10 ಕೋಟಿ ಮಹಿಳೆಯ ಖಾತೆಗಳಿಗೆ ಇನ್ನೂ 2000  ರೂಪಾಯಿ ಜಮೆ ಆಗಿರಲಿಲ್ಲ. ಅಲ್ಲದೇ ರಾಜ್ಯದಲ್ಲಿನ ಸುಮಾರು 16 ಲಕ್ಷ ಜನರಿಗೆ ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಹಣ ವರ್ಗಾವಣೆ ಆಗಿಲ್ಲ.

ಇದನ್ನೂ ಓದಿ : ಗೃಹಲಕ್ಷ್ಮೀ 2ನೇ ಕಂತಿನ ಹಣ ಎಲ್ಲರಿಗೂ ಸಿಗಲ್ಲ‌ ! ಯಾವುದಕ್ಕೂ ಒಮ್ಮೆ ಸ್ಟೇಟಸ್‌ ಚೆಕ್‌ ಮಾಡಿ

ಪ್ರಮುಖವಾಗಿ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗದ ಸಮಸ್ಯೆಯ ಹಿನ್ನೆಲೆಯಲ್ಲಿ ಹಣ ವರ್ಗಾವಣೆ ಆಗಿಲ್ಲ ಅಂತಾ ಸರಕಾರ ಹೇಳಿದೆ. ಇದೀಗ ಗೃಹಲಕ್ಷ್ಮೀ ಯೋಜನೆಯ ಎರಡನೇ ಕಂತಿನ ಹಣ ಯಾವಾಗ ವರ್ಗಾವಣೆ ಆಗಲಿದೆ ಅನ್ನೋದಕ್ಕೆ ಉತ್ತರ ಸಿಕ್ಕಿದೆ.

Gruha Lakshmi scheme good news 2nd installment money deposit date announced October 2nd week
Image Credit to Original Source

ಅಕ್ಟೋಬರ್ 2ನೇ ವಾರದಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಮೊದಲ ಕಂತಿನ ಹಣ ಸಿಗದ ಮಹಿಳೆಯರು ತಮ್ಮ ಪಡಿತರ ಚೀಟಿ, ಬ್ಯಾಂಕ್‌ ಖಾತೆ ಹಾಗೂ ಆಧಾರ್‌ ಕಾರ್ಡ್‌ನಲ್ಲಿ ಇರುವ ಲೋಪದೋಷ ಸರಿ ಪಡಿಸಿಕೊಂಡು ಹಣ ಪಡೆಯಲು ಅವಕಾಶವಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ ಸಿಕ್ಕಿಲ್ವಾ ? ಹಾಗಾದ್ರೆ ಗುಡ್‌ನ್ಯೂಸ್‌, ಸರಕಾರದಿಂದ ಹೊಸ ರೂಲ್ಸ್‌

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದು ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಿ ಹಣವನ್ನು ವರ್ಗಾವಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇನ್ನೊಂದೆಡೆಯಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಕೂಡ ಪುನರುಚ್ಚರಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ರೇಷನ್‌ ಕಾರ್ಡ್‌ ತಿದ್ದುಪಡಿ ಕಾರ್ಯ ನಡೆಯುತ್ತಿದೆ. ಈ ಕುರಿತು ಜನರು ತಮ್ಮ ಜಿಲ್ಲೆಗಳಿಗೆ ನೀಡಿರುವ ದಿನಾಂಕದಂದು ತಿದ್ದುಪಡಿಸಿ ಮಾಡಿಸಿಕೊಳ್ಳುವುದು ಒಳಿತು. ರಾಜ್ಯ ಸರಕಾರ ಇದೀಗ ಎರಡನೇ ಬಾರಿಗೆ ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ.

ರಾಜ್ಯ ಸರಕಾರ ಗೃಹಲಕ್ಷ್ಮೀ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಿದ್ದತೆ ಮಾಡಿಕೊಂಡಿದೆ. ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ತಾಂತ್ರಿಕ ದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುತ್ತದೆ.

Gruha Lakshmi scheme good news 2nd installment money deposit date announced October 2nd week

Comments are closed.