Gruha Lakshmi Yojana : ಗೃಹಲಕ್ಷ್ಮೀ ಯೋಜನೆಗೆ ಮುಹೂರ್ತ ಫಿಕ್ಸ್‌ : ಯಜಮಾನಿ 2000 ರೂ. ಪಡೆಯಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು : Gruha Lakshmi Yojana : ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿಯನ್ನು ನೀಡುವ ಗೃಹಲಕ್ಷ್ಮೀ ಯೋಜನೆಗೆ ಮುಹೂರ್ತ ಫಿಕ್‌ ಆಗಿದೆ. ರಾಜ್ಯದ ಕಾಂಗ್ರೆಸ್‌ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಇದೇ ಜುಲೈ 14 ರಿಂದಲೇ ಜಾರಿಗೆ ಬರಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲುಗಳು ಬೇಕು, ಹೇಗೆ ಅರ್ಜಿ ಸಲ್ಲಿಸಬಹುದು ಅನ್ನೋ ಮಾಹಿತಿ ಇಲ್ಲಿದೆ.

ಜುಲೈ 14 ರಂದು ವಿಧಾನಸೌದದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಕಾರ್ಯಕ್ರಮದಲ್ಲಿ 10 ಮಂದಿ ಮನೆ ಯಜಮಾನಿಯರಿಗೆ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಆಪ್‌ ಸಿದ್ದಪಡಿಸಿದೆ. ಗೃಹಜ್ಯೋತಿ ಯೋಜನೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ನಿವಾರಣೆ ಮಾಡುವ ಸಲುವಾಗಿ ಇಲಾಖೆ ತಾಂತ್ರಿಕವಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ.

ಇದನ್ನೂ ಓದಿ : ಬ್ರಹ್ಮಾವರಕ್ಕೆ ಬೇಕಿದೆ ಕೃಷಿ ಕಾಲೇಜು, ಕರಾವಳಿ ಕೃಷಿಕರ ಬಗ್ಗೆ ಯಾಕಿಷ್ಟು ನಿರ್ಲಕ್ಷ್ಯ ?

ಮನೆಯ ಯಜಮಾನಿ 2000 ರೂಪಾಯಿ ಹಣವನ್ನು ಪಡೆಯುವ ಗೃಹಲಕ್ಷ್ಮೀ ಯೋಜನೆಗೆ ಗೂಗಲ್‌ ಪ್ಲೇ ಸ್ಟೋರ್‌, ಆಪಲ್‌ ಆಪ್‌ ಜೊತೆಗೆ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಪ್ರತ್ಯೇಕ ಆಪ್‌ ಸಿದ್ದಪಡಿಸುತ್ತಿರುವ ಕಾರಣದಿಂದಲೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ವಿಳಂಭವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಬಿಪಿಎಲ್‌, ಎಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ನಲಿ ಮನೆಯೊಡತಿಯ ಹೆಸರು ಇರಲೇ ಬೇಕು. ಮನೆಯ ಯಜಮಾನಿಗೆ ಬ್ಯಾಂಕ್‌ ಖಾತೆಯ ಜೊತೆಗೆ ಮೊಬೈಲ್‌ ಸಂಖ್ಯೆ ಲಿಂಕ್‌ ಆಗಿರಬೇಕು. ಮನೆಯ ಯಜಮಾನಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಅಲ್ಲದೇ ಮನೆಯೊಡತಿಯ ಪತಿ ಜಿಎಸ್‌ಟಿ ಪಾವತಿದಾರರಾಗಿರಬಾರದು ಎಂಬ ನಿಯಮಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ : ಕರಾವಳಿಯಲ್ಲಿ ಕೆಮಿಕಲ್‌ ಮರವಾಯಿ : ತಿಂದವರಿಗೆ ವಾಂತಿ, ಬೇಧಿ ಫಿಕ್ಸ್‌, ತಿನ್ನುವ ಮುನ್ನ ಹುಷಾರ್‌ !

Comments are closed.