Gruha Lakshmi Yojana : ಗೃಹಲಕ್ಷ್ಮೀ ಯೋಜನೆಗೆ ಮನೆಯಿಂದಲೇ ಅರ್ಜಿ ಸಲ್ಲಿಸಿ : ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : (Gruha Lakshmi Yojana) ರಾಜ್ಯ ಸರಕಾರ ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕರ್ನಾಟಕ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಗೆ ಮನೆಯ ಯಜಮಾನಿ ಮನೆಯಿಂದಲೇ ಸುಲಭವಾಗಿ ಅರ್ಜಿ ಸಲ್ಲಿಸಬಹುದು.

ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಅರ್ಜಿ ಸ್ವೀಕರಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಕಂದಾಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ಯೋಜನೆಯಡಿ 1.30 ಕೋಟಿ ಅರ್ಜಿಗಳು ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ಎರಡು ತಿಂಗಳೊಳಗೆ ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಬೇಕಿರುವುದರಿಂದ ಫಲಾನುಭವಿಗಳ ಮನೆ ಬಾಗಿಲಿಗೆ ಅರ್ಜಿಗಳನ್ನು ಸ್ವೀಕರಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ 898 ನಾಡ ಕಚೇರಿಗಳು ಸೇರಿದಂತೆ 7000ಕ್ಕೂ ಹೆಚ್ಚು ಸೇವಾ ಸಿಂಧು ಕಚೇರಿ, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್ ಕೇಂದ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 15ರಿಂದ ಅರ್ಜಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು. ಮಗ ತೆರಿಗೆ ಕಟ್ಟಿದರೂ ತಾಯಿಗೆ 2 ಸಾವಿರ ಸಿಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಅದೇ ಸಮಯದಲ್ಲಿ, ಮಗ ತೆರಿಗೆ ಪಾವತಿಸುತ್ತಿದ್ದರೂ, ತಾಯಿಯೂ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿ ಎಂದು ಹೇಳಿದರು.

ಇದನ್ನೂ ಓದಿ : Kundapura News : ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಆದರೆ, ಈ ಹಿಂದೆ ಆಕೆ ತನ್ನ ಪತಿ ಮಾತ್ರವಲ್ಲದೇ, ತನ್ನ ಮಗನೂ ತೆರಿಗೆ ಪಾವತಿದಾರನಾಗಿದ್ದು, ಗೃಹಲಕ್ಷ್ಮಿ ಖಾತರಿ ಯೋಜನೆಯ ಫಲಾನುಭವಿಯಾಗಲು ಸಾಧ್ಯವಿಲ್ಲ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಗ ತೆರಿಗೆ ಕಟ್ಟುತ್ತಿದ್ದರೂ ಜಿಎಸ್ ಟಿ ಕಟ್ಟುತ್ತಿದ್ದರೂ ತಾಯಿಗೆ ಪ್ರತಿ ತಿಂಗಳು 2000 ರೂ. ಸಿಗುವುದಿಲ್ಲ ಎಂದು ಹೇಳಿದರು.

Gruha Lakshmi Yojana: Apply for this scheme from home; Details

Comments are closed.